ADVERTISEMENT

ಕೃತಕ ಬುದ್ಧಿಮತ್ತೆ ಅಪಾಯದ ಬಗ್ಗೆ ಚೀನಾ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 31 ಮೇ 2023, 14:13 IST
Last Updated 31 ಮೇ 2023, 14:13 IST
.
.   

ಬೀಜಿಂಗ್‌: ಕೃತಕ ಬುದ್ಧಿಮತ್ತೆಯಿಂದಾಗುವ ಅಪಾಯಗಳ ಬಗ್ಗೆ ಚೀನಾದ ಆಡಳಿತಾರೂಢ ಕಮ್ಯುನಿಸ್ಟ್‌ ಪಕ್ಷವು ಎಚ್ಚರಿಸಿದ್ದು ರಾಷ್ಟ್ರೀಯ ಭದ್ರತಾ ಕ್ರಮಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

ಅಧ್ಯಕ್ಷ ಷಿ–ಜಿನ್‌ಪಿಂಗ್‌ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆ ನಂತರ ಈ ಹೇಳಿಕೆ ಹೊರಬಿದ್ದಿದೆ. ಅಮೆರಿಕದ ವಿಜ್ಞಾನಿಗಳು ಮತ್ತು ತಂತ್ರಜ್ಞಾನ ಪರಿಣತರು ಕೃತಕ ಬುದ್ಧಿಮತ್ತೆಯು ಮಾನವನ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಎಚ್ಚರಿಸಿದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಎದುರಿಸಬಹುದಾದ ಸವಾಲುಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜಿನ್‌ಪಿಂಗ್‌ ಸೂಚಿಸಿದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.