ADVERTISEMENT

ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ ಅಣೆಕಟ್ಟು: ಚೀನಾ ಸಂಸತ್‌ ಅನುಮೋದನೆ

ಪಿಟಿಐ
Published 11 ಮಾರ್ಚ್ 2021, 12:36 IST
Last Updated 11 ಮಾರ್ಚ್ 2021, 12:36 IST
ಚೀನಾ ಸಂಸತ್‌ನಲ್ಲಿ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮಾತನಾಡಿದರು – ಎಎಫ್‌ಪಿ ಚಿತ್ರ
ಚೀನಾ ಸಂಸತ್‌ನಲ್ಲಿ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮಾತನಾಡಿದರು – ಎಎಫ್‌ಪಿ ಚಿತ್ರ   

ಬೀಜಿಂಗ್‌: ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ ಅಣೆಕಟ್ಟು ನಿರ್ಮಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಒಳಗೊಂಡ 14ನೇ ಪಂಚವಾರ್ಷಿಕ ಯೋಜನೆಗೆ ಚೀನಾ ಸಂಸತ್‌ನ್ಯಾಷನಲ್‌ ಪೀಪಲ್ಸ್‌ ಕಾಂಗ್ರೆಸ್‌ (ಎನ್‌ಪಿಸಿ) ಗುರುವಾರ ಅನುಮೋದನೆ ನೀಡಿದೆ.

ಅರುಣಾಚಲಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಸಮೀಪ, ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಜಲವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪನೆಗೂ ಎನ್‌ಪಿಸಿ ಅನುಮೋದನೆ ನೀಡಲಾಗಿದೆ.

ಉದ್ದೇಶಿತ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಭಾರತ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಅಣೆಕಟ್ಟು ನಿರ್ಮಾಣಕ್ಕೆ ಭಾರತ, ಬಾಂಗ್ಲದೇಶ ಸಹ ಆಕ್ಷೇಪ ವ್ಯಕ್ತಪಡಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.