ADVERTISEMENT

ಭಾರತದ ಸೇನಾ ಸಾಮರ್ಥ್ಯ ವೃದ್ಧಿಗೆ ಕರೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 13:21 IST
Last Updated 12 ಏಪ್ರಿಲ್ 2024, 13:21 IST
.
.   

ವಾಷಿಂಗ್ಟನ್: ಭಾರತದ ಸೇನಾ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಇಂಡೊ–ಪೆಸಿಫಿಕ್‌ ಪ್ರದೇಶದಲ್ಲಿ ಸ್ಥಿರವಾದ ಅಧಿಕಾರದ ಸಮತೋಲನ ಸಾಧಿಸಲು ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬಹುದು ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್‌ ಆಸ್ಟಿನ್‌ ಸಂಸದರಿಗೆ ತಿಳಿಸಿದರು.

ರಕ್ಷಣಾ ಇಲಾಖೆಯ ವಾರ್ಷಿಕ ಬಜೆಟ್‌ ಕುರಿತ ಸಭೆ ವೇಳೆ ಮಾತನಾಡಿದ ಅವರು, ಇಂಡೊ–ಪೆಸಿಫಿಕ್‌ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ಭಾರತ–ಅಮೆರಿಕ ಸೇನೆಗಳ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಬೇಕು ಎಂದು ಅಭಿಪ್ರಾಯಪಟ್ಟರು. 

‘ಈ ಬಜೆಟ್‌ ಮೂಲಕ ಅಮೆರಿಕ–ಭಾರತದ ಬಾಂಧವ್ಯದ ಹೊಸ ಅಧ್ಯಾಯ ಆರಂಭವಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲು ಉಭಯ ದೇಶಗಳ ಸೇನೆಯ ಜಂಟಿ ಸಮರಾಭ್ಯಾಸ, ಮಾಹಿತಿ ವಿನಿಮಯ ಮತ್ತು ಇತರೆ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುತ್ತಿವೆ. ಬೆಳೆಯುತ್ತಿರುವ ಭಾರತ–ಅಮೆರಿಕ ಪಾಲುದಾರಿಕೆಯನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.