ADVERTISEMENT

ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಲಿ: ಪಾಕಿಸ್ತಾನಕ್ಕೆ ಚೀನಾ ಸಲಹೆ

ಪಿಟಿಐ
Published 31 ಮಾರ್ಚ್ 2022, 13:48 IST
Last Updated 31 ಮಾರ್ಚ್ 2022, 13:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪದಚ್ಯುತಿಗೆ ಅವಿಶ್ವಾಸ ನಿರ್ಣಯ ಮಂಡನೆಯಾಗಿರುವ ಬೆನ್ನಲ್ಲೇ, ದೇಶದ ಅಭಿವೃದ್ಧಿ ಮತ್ತು ಸ್ಥಿರತೆಗಾಗಿ ಪಾಕಿಸ್ತಾನದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿರಬೇಕು ಎಂದು ಚೀನಾ ಸಲಹೆ ನೀಡಿದೆ.

ಪಾಕಿಸ್ತಾನದ ಎಲ್ಲಾ ಕಾಲದ ಆತ್ಮೀಯ ಸ್ನೇಹಿತ ಎಂಬ ಖ್ಯಾತಿಯ ಚೀನಾ, ಯಾವುದೇ ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದೇ ಇರುವುದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದೆ.

ಪಾಕಿಸ್ತಾನದಲ್ಲಿನ ನಾಯಕತ್ವ ಬದಲಾವಣೆಯು ಪಾಕಿಸ್ತಾನದ ಜತೆಗಿನ ಬಾಂಧವ್ಯದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಗುರುವಾರ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಪ್ರತಿಕ್ರಿಯಿಸಿದರು. ಎಲ್ಲಾ ಕಾಲದ ಸಹಕಾರ ಪಾಲುದಾರಿಕೆ ಮತ್ತು ಸ್ನೇಹದ ರಾಷ್ಟ್ರವಾದ ಪಾಕಿಸ್ತಾನದ ಎಲ್ಲಾ ಪಕ್ಷಗಳು ಒಟ್ಟಾಗಿ, ದೇಶದ ಅಭಿವೃದ್ಧಿ ಮತ್ತು ಸ್ಥಿರತೆಯ ಹಿತಾಸಕ್ತಿಯನ್ನು ಎತ್ತಿ ಹಿಡಿಯಲಿವೆ ಎಂಬ ಭರವಸೆಯಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.