ಗುವಾಹಟಿ: ಅಸ್ಸಾಂನದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ಇಳಿಸಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಐದು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಸೋಮವಾರ ಹೇಳಿದೆ.
ವಿವಿಧ ಪಕ್ಷಗಳೊಂದಿಗಿನ ಚರ್ಚೆಯ ನಂತರ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್), ಸಿಪಿಐ, ಸಿಪಿಐ (ಎಂ), ಸಿಪಿಐ (ಎಂಎಲ್) ಮತ್ತು ಅಂಚಲಿಕ್ ಗಣ ಮೋರ್ಚಾಗಳೊಂದಿಗೆ ಕಾಂಗ್ರೆಸ್ ಕೈಜೋಡಿಸಲು ನಿರ್ಧರಿಸಿದೆ ಎಂದು ಎಪಿಸಿಸಿ ಅಧ್ಯಕ್ಷ ರಿಪುನ್ ಬೋರಾ ತಿಳಿಸಿದರು.
'ಬಿಜೆಪಿಯ ಎಲ್ಲ ವಿರೋಧಿ ಪಕ್ಷಗಳಿಗೆ ನಮ್ಮ ಬಾಗಿಲು ತೆರೆದಿರುತ್ತದೆ. ಆಡಳಿತ ಪಕ್ಷವನ್ನು ಅಧಿಕಾರದಿಂದ ಇಳಿಸುವ ನಮ್ಮ ಹೋರಾಟಕ್ಕೆ ಪ್ರಾದೇಶಿಕ ಪಕ್ಷಗಳು ಕೈಜೋಡಿಸಬೇಕು ಎಂದು ನಾವು ಆಹ್ವಾನಿಸುತ್ತೇವೆ,' ಎಂದು ರಾಜ್ಯಸಭಾ ಸಂಸದ ಬೋರಾ ಹೇಳಿದರು.
ರಾಷ್ಟ್ರದ ಹಿತದೃಷ್ಟಿಯಿಂದ ಎಲ್ಲಾ ಕೋಮು ಶಕ್ತಿಗಳನ್ನು ಮಣಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.