ADVERTISEMENT

Covid-19 World Update: ಅಮೆರಿಕದಲ್ಲಿ 90 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು

ಏಜೆನ್ಸೀಸ್
Published 12 ಜನವರಿ 2021, 17:13 IST
Last Updated 12 ಜನವರಿ 2021, 17:13 IST
ಫ್ರಾನ್ಸ್‌ನಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವ ಹಿರಿಯ ಮಹಿಳೆ
ಫ್ರಾನ್ಸ್‌ನಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವ ಹಿರಿಯ ಮಹಿಳೆ   

ವಾಷಿಂಗ್ಟನ್‌: ಜಗತ್ತಿನಾದ್ಯಂತ ಕೋವಿಡ್–19 ದೃಢಪಟ್ಟ ಒಟ್ಟು 9.15 ಕೋಟಿ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 6.55 ಕೋಟಿ ಸೋಂಕಿತರು ಗುಣಮುಖರಾಗಿದ್ದು, 19.58 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ಪ್ರಸ್ತುತ ವಿಶ್ವದಾದ್ಯಂತ ಒಟ್ಟಾರೆ 2.40 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1.09 ಲಕ್ಷ ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಈವರೆಗೂ 2.31 ಕೋಟಿಗೂ ಅಧಿಕ ಪ್ರಕರಣಗಳು ದಾಖಲಾಗಿದ್ದು, 3.85 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. 90 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1.04 ಕೋಟಿಗೂ ಅಧಿಕ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1.51 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಇನ್ನೂ 2.17 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಬ್ರೆಜಿಲ್‌ನಲ್ಲಿ 7.22 ಲಕ್ಷ ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.