ADVERTISEMENT

Covid-19 World Update: ಅಲ್ಪ ಪ್ರಮಾಣದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 16:36 IST
Last Updated 30 ಡಿಸೆಂಬರ್ 2020, 16:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್‌: ಜಗತ್ತಿನಾದ್ಯಂತ ಅಲ್ಪ ಪ್ರಮಾಣದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿವೆ.

ಲಸಿಕೆಯಭರವಸೆಬೆನ್ನಲೇ ಪ್ರಕರಣಗಳು ಇಳಿಮುಖವಾಗುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈವರೆಗೂ ಒಟ್ಟು 8.25 ಕೋಟಿಗೂ ಹೆಚ್ಚು ಜನರಿಗೆ ಕೋವಿಡ್‌–19 ದೃಢಪಟ್ಟಿದೆ. ಈ ಪೈಕಿ 5.85 ಕೋಟಿ ಸೋಂಕಿತರು ಗುಣಮುಖರಾಗಿದ್ದು, 18 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ADVERTISEMENT

ಒಟ್ಟಾರೆ 2.21 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1.06 ಲಕ್ಷಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಯುರೋಪ್‌ ಸೇರಿದಂತೆ ಬಹುತೇಕ ಕೋವಿಡ್‌ ಪೀಡಿತ ದೇಶಗಳು ಕೋವಿಡ್‌ ಎರಡನೇ ಅಲೆಯ ಭೀತಿಯಲ್ಲಿವೆ. ಎರಡನೇ ಅಲೆ ವೇಗವಾಗಿ ಹರಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.