ADVERTISEMENT

Covid-19 World Update: ಜಗತ್ತಿನಾದ್ಯಂತ 7.28 ಕೋಟಿಗೂ ಅಧಿಕ ಪ್ರಕರಣಗಳು

ಏಜೆನ್ಸೀಸ್
Published 14 ಡಿಸೆಂಬರ್ 2020, 16:58 IST
Last Updated 14 ಡಿಸೆಂಬರ್ 2020, 16:58 IST
ಕೋವಿಡ್–19 ಲಸಿಕೆ–ಸಾಂದರ್ಭಿಕ ಚಿತ್ರ
ಕೋವಿಡ್–19 ಲಸಿಕೆ–ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್‌: ಜಗತ್ತಿನಾದ್ಯಂತ 5.10 ಕೋಟಿಗೂ ಹೆಚ್ಚು ಜನರು ಕೋವಿಡ್‌–19ನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ 2.01 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿವೆ.

ಈವರೆಗೂ ಕೋವಿಡ್‌–19 ದೃಢಪಟ್ಟ 7.28 ಕೋಟಿಗೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 16,22,567 ಮಂದಿ ಮೃತಪಟ್ಟಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು 1.67 ಕೋಟಿಗೂ ಅಧಿಕ ಪ್ರಕರಣಗಳು ದಾಖಲಾಗಿದ್ದು, 97.27 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಹಾಗೂ 3.06 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 67.18 ಲಕ್ಷ ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬ್ರೆಜಿಲ್‌ನಲ್ಲಿ 7.39 ಲಕ್ಷ ಸಕ್ರಿಯ ಪ್ರಕರಣಗಳು, ರಷ್ಯಾದಲ್ಲಿ 5.09 ಲಕ್ಷ, ಭಾರತದಲ್ಲಿ 3.42 ಲಕ್ಷ, ಫ್ರಾನ್ಸ್‌ನಲ್ಲಿ 21.41 ಲಕ್ಷ ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.