ADVERTISEMENT

Covid-19 World Update: 12.07 ಕೋಟಿ ಜನರಿಗೆ ಸೋಂಕು, 9.74 ಸೋಂಕಿತರು ಗುಣಮುಖ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 8:06 IST
Last Updated 16 ಮಾರ್ಚ್ 2021, 8:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಸೋಮವಾರ ಒಂದೇ ದಿನ ಬರೋಬ್ಬರಿ 3,36,327 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 6,550 ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರ್ಲ್ಡೋಮೀಟರ್‌ ವೆಬ್‌ಸೈಟ್‌ ವರದಿ ಮಾಡಿದೆ.

ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 12.07 (12,07,84,671) ಕೋಟಿಗೂ ಅಧಿಕ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 9.74 (9,74,34,194) ಕೋಟಿ ಸೋಂಕಿತರು ಗುಣಮುಖರಾಗಿದ್ದು, 26.72 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ 2.06 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 88,161 ಜನರ ಸ್ಥಿತಿ ಗಂಭೀರವಾಗಿದೆ.
ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 3,01,38,586 ಪ್ರಕರಣಗಳು ದಾಖಲಾಗಿದ್ದು, 5,48,013 ಜನರು ಮೃತಪಟ್ಟಿದ್ದಾರೆ.

ADVERTISEMENT

ಅಮೆರಿಕದ ನಂತರದ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 1.15 ಕೋಟಿ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 1.14 ಕೋಟಿ, ರಷ್ಯಾದಲ್ಲಿ 44 ಲಕ್ಷ, ಫ್ರಾನ್ಸ್‌ನಲ್ಲಿ 40.78 ಲಕ್ಷ ಮತ್ತು ಸ್ಪೇನ್‌ನಲ್ಲಿ 31.95 ಲಕ್ಷಕ್ಕೆ ಏರಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.