ADVERTISEMENT

Covid-19 World Updates: 6.63 ಕೋಟಿ ಸೋಂಕಿತರು, 15.27 ಲಕ್ಷ ಜನ ಸಾವು

ಏಜೆನ್ಸೀಸ್
Published 5 ಡಿಸೆಂಬರ್ 2020, 15:13 IST
Last Updated 5 ಡಿಸೆಂಬರ್ 2020, 15:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್‌: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.69 ಲಕ್ಷ ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 3,769 ಜನರು ಸಾವಿಗೀಡಾಗಿದ್ದಾರೆ. ಕೋವಿಡ್‌–19 ನಿಂದಾಗಿ ಈವರೆಗೆ 15.27 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿಮಾಡಿದೆ.

ಶನಿವಾರದ ವೇಳೆಗೆ ಜಗತ್ತಿನಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 6.63 ಕೋಟಿಗೆ ಏರಿಕೆಯಾಗಿದ್ದು, 4.59 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಇಂದು 28,782 ಹೊಸ ಪ್ರಕರಣಗಳು ವರದಿಯಾಗಿವೆ. ಮಾತ್ರವಲ್ಲದೆ 508 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಈ ದೇಶದಲ್ಲಿ ಪ್ರಕರಣಗಳ ಸಂಖ್ಯೆ 24.31 ಲಕ್ಷಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 42,684 ಆಗಿದೆ. 19.16 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ADVERTISEMENT

ಇಂದು ಅಮೆರಿಕದಲ್ಲಿ 6,566, ಭಾರತದಲ್ಲಿ 36,652 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ 90 ಲಕ್ಷ ಸೋಂಕಿತರು ಗುಣಮುಖ

96.09 ಲಕ್ಷ ಪ್ರಕರಣಗಳು ವರದಿಯಾಗಿರುವ ಭಾರತದಲ್ಲಿ, ಈವರೆಗೆ 90.59 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1.39 ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ 4.10 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ.

ಅತಿಹೆಚ್ಚು (1 ಕೋಟಿ 47 ಲಕ್ಷ) ಪ್ರಕರಣಗಳು ದಾಖಲಾಗಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 86.63 ಲಕ್ಷ ಮಂದಿ ಗುಣಮುಖರಾಗಿದ್ದಾರೆ.

ಒಟ್ಟಾರೆ ಪ್ರಪಂಚದಾದ್ಯಂತ ಇನ್ನೂ 1.88 ಕೋಟಿ ಪ್ರಕರಣಗಳು ಸಕ್ರಿಯವಾಗಿದ್ದು, ಇದರಲ್ಲಿ 1.06 ಲಕ್ಷ ಸೋಂಕಿತರು ಗಂಭೀರ ಸ್ಥಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.