ADVERTISEMENT

Covid-19 World Update: ಜಗತ್ತಿನಲ್ಲಿ 67 ಸಾವಿರ ಪೀಡಿತರ ಸ್ಥಿತಿ ಗಂಭೀರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2020, 15:57 IST
Last Updated 8 ಅಕ್ಟೋಬರ್ 2020, 15:57 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಪೀಡಿತರ ಪೈಕಿ 67 ಸಾವಿರ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಸುಮಾರು 79 ಲಕ್ಷ ಪೀಡಿತರು ಗಂಭೀರವಲ್ಲದ ಸ್ಥಿತಿಯಲ್ಲಿ ಇದ್ದಾರೆ ಎಂದು ವರ್ಡೋ ಮೀಟರ್‌ ತಿಳಿಸಿದೆ.

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 3,65,02,648ಕ್ಕೆ ಮುಟ್ಟಿದ್ದು, 10,62,107 ಮಂದಿ ಮೃತಪಟ್ಟಿದ್ದಾರೆ. 2,74,70,758 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,69,783 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 77,85,026 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,17,056 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 49,96,972 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ADVERTISEMENT

ಭಾರತದಲ್ಲಿ 68,35,655, ಬ್ರೆಜಿಲ್‌ನಲ್ಲಿ 50,02,357, ರಷ್ಯಾದಲ್ಲಿ 12,60,112, ಕೊಲಂಬಿಯಾದಲ್ಲಿ 8,77,683, ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.