ADVERTISEMENT

Covid-19 World Update: 2.57 ಕೋಟಿಗೂ ಅಧಿಕ ಕೊರೊನಾ ಸೋಂಕಿತರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2020, 17:15 IST
Last Updated 2 ಅಕ್ಟೋಬರ್ 2020, 17:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   
""
""

ವಾಷಿಂಗ್ಟನ್: ಜಗತ್ತಿನಾದ್ಯಂತ 3.46 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 3,46,25,699ಕ್ಕೆ ಮುಟ್ಟಿದ್ದು, 10,29,752 ಮಂದಿ ಮೃತಪಟ್ಟಿದ್ದಾರೆ. 2,57,74,725 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 78,21,222 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 75,07,524 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,12,912 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 47,50,176 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 64,38,968, ಬ್ರೆಜಿಲ್‌ನಲ್ಲಿ 48,49,229, ರಷ್ಯಾದಲ್ಲಿ 11,94,643, ಕೊಲಂಬಿಯಾದಲ್ಲಿ 8,35,339, ಪೆರುವಿನಲ್ಲಿ 8,18,297, ಚಿಲಿಯಲ್ಲಿ 4,66,590, ಇರಾನ್‌ನಲ್ಲಿ 4,64,596, ಇಂಗ್ಲೆಂಡ್‌ನಲ್ಲಿ 4,67,146, ಸ್ಪೇನ್‌ನಲ್ಲಿ 7,78,607 ಮತ್ತು ದಕ್ಷಿಣ ಆಫ್ರಿಕಾದಲ್ಲಿ 6,76,084 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.