ADVERTISEMENT

Covid-19 World Update: 7.69 ಕೋಟಿಗೂ ಅಧಿಕ ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2021, 17:00 IST
Last Updated 4 ಫೆಬ್ರುವರಿ 2021, 17:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 10.51 ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 7.68 ಕೋಟಿ ಸೋಂಕಿತರು ಗುಣಮುಖರಾಗಿದ್ದು, 22.83 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 2,15,122 ಪ್ರಕರಣಗಳು ಬೆಳಕಿಗೆ ಬಂದಿದ್ದು, 6,603 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 7,68,26,118 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.58 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,06,282 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 11,470 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 300 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,62,236ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1 ಕೋಟಿಗೂ ಅಧಿಕ ಪ್ರಕರಣಗಳು ವರದಿಯಾಗಿವೆ.

ADVERTISEMENT

ಉಳಿದಂತೆ ಬ್ರೆಜಿಲ್‌ನಲ್ಲಿ 93,54,609, ಫ್ರಾನ್ಸ್‌ನಲ್ಲಿ 32,51,160, ರಷ್ಯಾದಲ್ಲಿ 39,17,918 ಲಕ್ಷ, ಸ್ಪೇನ್‌ನಲ್ಲಿ 29,13,389 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.