ADVERTISEMENT

Covid-19 World Update | 2.6 ಕೋಟಿ ಕೊರೊನಾ ಸೋಂಕಿತರು, 8.6 ಲಕ್ಷ ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಸೆಪ್ಟೆಂಬರ್ 2020, 17:18 IST
Last Updated 2 ಸೆಪ್ಟೆಂಬರ್ 2020, 17:18 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್: ಜಗತ್ತಿನಾದ್ಯಂತ ಸುಮಾರು 2.6 ಕೋಟಿ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 8.6 ಲಕ್ಷ ಜನರು ಸಾವಿಗೀಡಾಗಿದ್ದಾರೆ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್‌ ಸೆಂಟರ್ ಪ್ರಕಾರ, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 26,038,688ಕ್ಕೆ ಮುಟ್ಟಿದ್ದು, 863,566 ಮಂದಿ ಮೃತಪಟ್ಟಿದ್ದಾರೆ. 18,288,698 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 62,69,815 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 1,89,251 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 35,06,751 ಜನರು ಈವರೆಗೆ ಗುಣಮುಖರಾಗಿದ್ದಾರೆ.

ADVERTISEMENT

ಬ್ರೆಜಿಲ್‌ನಲ್ಲಿ 39,61,502, ಭಾರತದಲ್ಲಿ 38,23,449, ರಷ್ಯಾದಲ್ಲಿ 9,97,072, ದಕ್ಷಿಣ ಆಫ್ರಿಕಾದಲ್ಲಿ 6,28,259, ಪೆರುವಿನಲ್ಲಿ 6,57,129, ಚಿಲಿಯಲ್ಲಿ 4,13,145, ಇರಾನ್‌ನಲ್ಲಿ 3,79,894 , ಇಂಗ್ಲೆಂಡ್‌ನಲ್ಲಿ 3,39,415 ಮತ್ತು ಸ್ಪೇನ್‌ನಲ್ಲಿ 4,70,973 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.