ADVERTISEMENT

Covid-19 World Update: ಜಗತ್ತಿನಾದ್ಯಂತ 79.80 ಲಕ್ಷ ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 15:54 IST
Last Updated 4 ಅಕ್ಟೋಬರ್ 2020, 15:54 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   
""
""
""

ವಾಷಿಂಗ್ಟನ್‌: ಜಗತ್ತಿನಾದ್ಯಂತ 3.52 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10.39 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 2.62 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,80,768 ಸಕ್ರಿಯ ಪ್ರಕರಣಗಳಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 76,06,854 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,14,330 ಮಂದಿ ಸಾವಿಗೀಡಾಗಿದ್ದಾರೆ. 48,28,654 ಜನರು ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 65,73,678, ಬ್ರೆಜಿಲ್‌ನಲ್ಲಿ 49,06,833, ರಷ್ಯಾದಲ್ಲಿ 12,15,001 ಕೊಲಂಬಿಯಾದಲ್ಲಿ 8,48,147, ಪೆರುವಿನಲ್ಲಿ 8,24,985, ಇಂಗ್ಲೆಂಡ್‌ನಲ್ಲಿ 4,80,017, ಸ್ಪೇನ್‌ನಲ್ಲಿ 8,10,807 ಮತ್ತು ದಕ್ಷಿಣ ಆಫ್ರಿಕಾದಲ್ಲಿ ಒಟ್ಟು 6,79,716 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.