ADVERTISEMENT

ಸಿಂಗಾಪುರ: 250ಕ್ಕೂ ಹೆಚ್ಚು ಭಾರತೀಯರಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 11:01 IST
Last Updated 10 ಏಪ್ರಿಲ್ 2020, 11:01 IST
   

ಸಿಂಗಾಪುರ: ಇಲ್ಲಿವಾಸಿಸುತ್ತಿರುವ ಭಾರತ ಮೂಲದ 250 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ವೈರಸ್‌ ಸೋಂಕು ಇರುವುದು ಪತ್ತೆಯಾಗಿದೆ ಎಂದು ಭಾರತೀಯ ಹೈಕಮಿಷನ್‌ ಶುಕ್ರವಾರ ತಿಳಿಸಿದೆ.

ಸೋಂಕು ಪೀಡಿತರಲ್ಲಿ ಹೆಚ್ಚು ಮಂದಿಯ ಆರೋಗ್ಯ ಸ್ಥಿರವಾಗಿದ್ದು, ಸುಧಾರಣೆ ಕಾಣುತ್ತಿದೆ ಎಂದು ಭಾರತೀಯ ಹೈಕಮಿಷನರ್‌ ಜಾವೇದ್‌ ಅಶ್ರಫ್‌ ತಿಳಿಸಿದ್ದಾರೆ.

ಸೋಂಕಿತರಲ್ಲಿ 250ಕ್ಕೂ ಹೆಚ್ಚು ಮಂದಿಯು ಭಾರತೀಯ ರಾಷ್ಟ್ರೀಯತೆ ಹೊಂದಿದ್ದಾರೆ, ಕೆಲವರು ಸಿಂಗಪುರದ ಖಾಯಂ ನಿವಾಸಿಗಳಾಗಿದ್ದಾರೆ ಎಂದು ಅಶ್ರಫ್‌ ಹೇಳಿದ್ದಾರೆ.

ADVERTISEMENT

ಕೊರೊನಾ ಸೋಂಕು ಪೀಡಿತರಲ್ಲಿ ಶೇ.50ಕ್ಕೂ ಹೆಚ್ಚು ಜನರು ವಿದೇಶಿ ಕಾರ್ಮಿಕರ ವಸತಿ ನಿಲಯಗಳಲ್ಲಿ ವಾಸವಿದ್ದರು.

ವಿದೇಶಿ ಕಾರ್ಮಿಕರ ವಸತಿ ನಿಲಯಗಳನ್ನು ಸಿಂಗಾಪುರದಲ್ಲಿ ಕೊರೊನಾ ಹರಡುವಿಕೆಯ ಮೂಲ ಜಾಗಗಳೆಂದು ಗುರುತಿಸಲಾಗಿದೆ.

ಸಿಂಗಾಪುರದಲ್ಲಿ ಮಾರಣಾಂತಿಕ ಕೊರೊನಾ ವೈರಸ್‌ಗೆ ಈಗಾಗಲೇ 6 ಮಂದಿ ಬಲಿಯಾಗಿದ್ದು, 1,910 ಸೋಂಕು ಪೀಡಿತರು ಪತ್ತೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.