ADVERTISEMENT

ಸೂಕ್ತ ಲಸಿಕೆ ಸಿಗುವವರೆಗೂ ಲಾಕ್‌ಡೌನ್‌ ಅನಿವಾರ್ಯ: ವಿಶ್ವ ಆರೋಗ್ಯ ಸಂಸ್ಥೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 10:03 IST
Last Updated 23 ಏಪ್ರಿಲ್ 2020, 10:03 IST
   

ಜಿನೇವಾ: ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೊನಾ ವೈರಸ್‌ ಸೋಂಕಿನ ಬಿಕ್ಕಟ್ಟು ಶೀಘ್ರದಲ್ಲಿ ಕೊನೆಗೊಳ್ಳುವ ಯಾವುದೇ ಸೂಚನೆಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಮೊದಲು ಚೀನಾದಲ್ಲಿ ಕಾಣಿಸಿಕೊಂಡ ಈ ಸೋಂಕು ಇಟಲಿ, ಸ್ಪೇನ್‌, ಪ್ರಾನ್ಸ್‌, ಇಂಗ್ಲೆಂಡ್‌ ಸೇರಿದಂತೆ ಅಮೆರಿಕಾದಲ್ಲಿ ಲಕ್ಷಾಂತರಜನರ ಪ್ರಾಣ ಹಾನಿಗೆ ಕಾರಣವಾಗಿದೆ. ಭಾರತದಲ್ಲೂ ಕೊರೊನಾ ಸೋಂಕು ವ್ಯಾಪಕವಾಗುತ್ತಿದೆ.

ಕೋವಿಡ್‌ ಸಾಂಕ್ರಾಮಿಕ ಪಿಡುಗುಈಗಾಗಲೇ ಜಗತ್ತಿನಾದ್ಯಂತ 180,000ಕ್ಕೂ ಹೆಚ್ಚು ಜನರ ಪ್ರಾಣ ಹಾನಿ ಮಾಡಿದೆ. 2.6 ದಶಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದಾರೆ.

ADVERTISEMENT

ಬಹುತೇಕ ರಾಷ್ಟ್ರಗಳು ಸೋಂಕು ಹರಡುವಿಕೆ ತಡೆಗಟ್ಟಲು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಂಡಿವೆ. ಇಷ್ಟಾದರೂ ಕೊರೊನಾ ಸೋಂಕಿನ ಹಾವಳಿ ನಿಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಕೊರೊನಾ ವೈರಸ್‌ ಸೋಂಕಿಗೆ ಸೂಕ್ತ ಚಿಕಿತ್ಸೆ ಅಥವಾ ಲಸಿಕೆ ಸಿಗುವವರೆಗೂ ಲಾಕ್‌ಡೌನ್‌ನಂತಹ ಕಟ್ಟನಿಟ್ಟಾದ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯ ಎಂದು ವಿಶ್ವ ಸಂಸ್ಥೆ ಮತ್ತು ಆರೋಗ್ಯ ತಜ್ಞರು ಹೇಳಿದ್ದಾರೆ.

ಲಾಕ್‌ಡೌನ್‌ನಂತಹ ಕ್ರಮಗಳಿಂದ ಹಾನಿಗೊಳಗಾದ ಆರ್ಥಿಕತೆಯನ್ನು ಸರಿಪಡಿಸಲು ಮುಂದಿನ ದಿನಗಳಲ್ಲಿ ಹಲವು ದೇಶಗಳು ಪ್ರಯತ್ನಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.