ADVERTISEMENT

ಕೊರೊನಾ ಸೋಂಕು: ಸ್ಪೇನ್‌‌ನಲ್ಲಿ 767 ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 13:24 IST
Last Updated 19 ಮಾರ್ಚ್ 2020, 13:24 IST
ಕೊರೊನಾ ಸೋಂಕಿನಿಂದ ಸ್ಪೇನ್‌‌ನ ನಿವಾಸಿಗಳು ತಮ್ಮ ಅಪಾರ್ಟ್‌ಮೆಂಟ್‌ಗಳಲ್ಲಿಯೇ ಗೃಹಬಂಧನದಲ್ಲಿ ಇರುವುದು
ಕೊರೊನಾ ಸೋಂಕಿನಿಂದ ಸ್ಪೇನ್‌‌ನ ನಿವಾಸಿಗಳು ತಮ್ಮ ಅಪಾರ್ಟ್‌ಮೆಂಟ್‌ಗಳಲ್ಲಿಯೇ ಗೃಹಬಂಧನದಲ್ಲಿ ಇರುವುದು   

ನವದೆಹಲಿ: ಕೊರೊನಾ ವೈರಸ್ ಸೋಂಕಿಗೆಸ್ಪೇನ್ನಲ್ಲಿ 767 ಮಂದಿ ಮೃತಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ ಸಾವಿನ ಪ್ರಮಾಣ ಶೇ.30ರಷ್ಟು ಹೆಚ್ಚಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಬುಧವಾರ ಅತಿ ಹೆಚ್ಚಿನ ಸಂಖ್ಯೆಯ ಜನರು ಮೃತಪಟ್ಟಿದ್ದು, ಸ್ಪೇನ್ ಎಲ್ಲಾ ನಾಗರಿಕರಿಗೆ ಮನೆಯಲ್ಲಿಯೇ ಇರಬೇಕೆಂದು ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ 14 ಸಾವಿರಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.