ADVERTISEMENT

ಕೊರೊನಾ ವೈರಸ್ ದಾಳಿಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ 2,004ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 5:05 IST
Last Updated 19 ಫೆಬ್ರುವರಿ 2020, 5:05 IST
ಕೊರೊನಾ ವೈರಸ್
ಕೊರೊನಾ ವೈರಸ್   

ಬೀಜಿಂಗ್: ಚೀನಾವಲ್ಲದೆ ಪ್ರಪಂಚದ ಹಲವು ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್ ದಾಳಿಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.

ಕಳೆದ 24 ಗಂಟೆಗಳಲ್ಲಿ 136 ಹೊಸ ಸಾವುಗಳು ಸಂಭವಿಸಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 2,004ಕ್ಕೆ ಏರಿಕೆಯಾಗಿದೆ ಎಂದು ಚೀನಾದ ಆರೋಗ್ಯ ಸಮಿತಿ ಬುಧವಾರ ತಿಳಿಸಿದೆ.

1,749 ಹೊಸ ಕೊರೊನಾ ವೈರಸ್ ಸೋಂಕು ತಗುಲಿದ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ, 74,185 ಮಂದಿಗೆ ಸೋಂಕು ತಗುಲಿದೆ. ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ 1,824 ಜನರು ಬಿಡುಗಡೆಯಾಗಿದ್ದು, ಇದು 14,376ಕ್ಕೆ ಏರಿದೆ ಎಂದು ಹೇಳಲಾಗಿದೆ.

ADVERTISEMENT

31 ಪ್ರಾಂತ್ಯಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೊರೊನಾ ವೈರಸ್ ಸೋಂಕು ತಗುಲಿರುವ 74,185 ಪ್ರಕರಣಗಳ ಪೈಕಿ 57,805 ಜನರು ಸೋಂಕಿಗೆ ಒಳಗಾಗಿದ್ದಾರೆ. 11,977 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು 14,376 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಹುಬೆ ರಾಜಧಾನಿಯಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಹರಡಲಾಗಿದೆ ಎಂದು ನಂಬಲಾಗಿದ್ದು, ನಗರದಲ್ಲಿ ಬುಧವಾರ 1,693 ಹೊಸ ಪ್ರಕರಣಗಳು ಮತ್ತು 132 ಸಾವುಗಳು ಸಂಭವಿಸಿವೆ. ಇಲ್ಲಿಯವರೆಗೆ ಹುಬೆಯಲ್ಲಿ 9,100 ಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 11,200 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಧಿಕಾರಿಗಳು ಚೀನಾಕ್ಕೆ ಪ್ರಯಾಣ ಮತ್ತು ವ್ಯಾಪಾರವನ್ನು ನಿರ್ಬಂಧಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇತರೆ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸೋಂಕು ತಗುಲುವುದನ್ನು ನಿಯಂತ್ರಿಸಲು ಚೀನಾ ಕೈಗೊಂಡಿರುವ ಕಠಿಣ ಕ್ರಮಗಳನ್ನು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.