ADVERTISEMENT

ಕೊರೊನಾ ಸೋಂಕು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಉಸಿರಾಟ ಸಮಸ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2020, 14:33 IST
Last Updated 3 ಅಕ್ಟೋಬರ್ 2020, 14:33 IST
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್   

ವಾಷಿಂಗ್ಟನ್: ಕೊರೊನಾ ಸೋಂಕು ತಗುಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಅವರು ತೀವ್ರ ಆಯಾಸದಿಂದ ಬಳಲುತ್ತಿದ್ದಾರೆ ಎಂದು ಸಿಎನ್‌ಎನ್‌ ಸುದ್ದಿ ವಾಹಿನಿ ವರದಿ ಮಾಡಿದೆ.

ಕೋವಿಡ್–19 ದೃಢಪಟ್ಟ ಕಾರಣ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಎಲ್ಲವೂ ಸರಿಯಾಗಲಿದೆ ಎಂದು ಭಾವಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು’ ಎಂದು ಕೆಲವು ಗಂಟೆಗಳ ಮುನ್ನ ಟ್ರಂಪ್ ಟ್ವೀಟ್ ಮಾಡಿದ್ದರು.

ADVERTISEMENT

ಸದ್ಯ, ವಾಲ್ಟರ್‌ ರೀಡ್ ರಾಷ್ಟ್ರೀಯ ಸೇನಾ ವೈದ್ಯಕೀಯ ಕೇಂದ್ರದಲ್ಲಿ ಟ್ರಂಪ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅನಾರೋಗ್ಯಕ್ಕೀಡಾಗದಂತೆ ನೋಡಿಕೊಳ್ಳುವುದಕ್ಕಾಗಿ ಪ್ರಾಯೋಗಿಕ ವೈರಾಣು ನಿಗ್ರಹ ಔಷಧವನ್ನು (ಆಂಟಿ ವೈರಲ್ ಡ್ರಗ್‌) ನೀಡಲಾಗುತ್ತಿದೆ.

ಮುಂದಿನ ಕೆಲವು ದಿನಗಳ ವರೆಗೆ ಟ್ರಂಪ್ ಆಸ್ಪತ್ರೆಯಲ್ಲೇ ಇದ್ದುಕೊಂಡು ಚಿಕಿತ್ಸೆ ಪಡೆಯಲಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.