ADVERTISEMENT

ಅಮೆರಿಕಾದಲ್ಲಿ ಡೆಡ್ಲಿ ಕೊರೊನಾಗೆ 11 ಭಾರತೀಯರು ಬಲಿ

ಏಜೆನ್ಸೀಸ್
Published 9 ಏಪ್ರಿಲ್ 2020, 3:39 IST
Last Updated 9 ಏಪ್ರಿಲ್ 2020, 3:39 IST
ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ದೃಶ್ಯ ಚಿತ್ರ: ಎಎಫ್‌‌ಪಿ
ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ದೃಶ್ಯ ಚಿತ್ರ: ಎಎಫ್‌‌ಪಿ   

ವಾಷಿಂಗ್ಟನ್ (ಪಿಟಿಐ): ಅಮೆರಿಕಾದ ವಾಷಿಂಗ್ಟನ್‌‌ನಲ್ಲಿ ಮಾರಣಾಂತಿಕ ಕೊರೊನಾಗೆ 11ಮಂದಿ ಭಾರತೀಯರು ಸಾವನ್ನಪ್ಪಿದ್ದು, 16 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೃತಪಟ್ಟವರಲ್ಲಿ ಭಾರತೀಯರಾಗಿದ್ದು ಪುರುಷರು ಎಂದು ಗೊತ್ತಾಗಿದೆ. ಅವರಲ್ಲಿ ಹತ್ತು ಮಂದಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯಲ್ಲಿ ವಾಸವಿದ್ದವರು. ಇವರಲ್ಲಿ ನಾಲ್ಕು ಮಂದಿ ನ್ಯೂಯಾರ್ಕ್ ನಗರದಲ್ಲಿಚಾಲಕರಾಗಿ ಕೆಲಸ ಮಾಡುತ್ತಿದ್ದರು.ಕೊರೊನಾ ಸೋಂಕು ಹರಡುವುದನ್ನುತಡೆಗಟ್ಟುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು, ಕೆಲವು ಸಂದರ್ಭಗಳಲ್ಲಿ ಮೃತರ ಶವಸಂಸ್ಕಾರಕ್ಕೂ ಸಂಬಂಧಿಕರು ಪಾಲ್ಗೊಳ್ಳುವುದನ್ನು ನಿರ್ಬಂಧಿಸಿದ್ದು ಸ್ಥಳೀಯ ಅಧಿಕಾರಿಗಳೇ ಶವಸಂಸ್ಕಾರ ನೆರವೇರಿಸುತ್ತಿದ್ದಾರೆ.

ಪರಿಸ್ಥಿತಿ ಬಿಗಡಾಯಿಸುತ್ತಿದ್ದು, 14 ಸಾವಿರ ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಅಲ್ಲದೆ, 4 ಲಕ್ಷಕ್ಕೂಅಧಿಕ ಮಂದಿಯನ್ನು ಈ ಸೋಂಕು ಕಾಡುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌‌ನಲ್ಲಿ ಹೆಚ್ಚು ಕೊರೊನಾ ಸೋಂಕು ಕಾಡುತ್ತಿದ್ದು, ಇಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿಸಾವನ್ನಪ್ಪಿದ್ದು, 1 ಲಕ್ಷದ 38 ಸಾವಿರ ಮಂದಿಗೆ ಸೋಂಕು ತಗುಲಿದೆ. ನ್ಯೂಜೆರ್ಸಿಯಲ್ಲಿ 1500 ಮಂದಿ ಸಾವನ್ನಪ್ಪಿದ್ದರೆ, 48 ಸಾವಿರ ಮಂದಿಗೆ ಸೋಂಕು ತಗುಲಿದೆ.

ADVERTISEMENT

ಫ್ಲೋರಿಡಾದಲ್ಲಿ ಕೊರೊನಾ ಸೋಂಕಿಗೆ ಒಬ್ಬ ಭಾರತೀಯ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಲ್ಲದೆ, ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್ ರಾಜ್ಯಗಳಲ್ಲಿನ ಕೆಲವು ಭಾರತೀಯರ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ. ಸೋಂಕು ತಗುಲಿ ಪಾಸಿಟಿವ್ ಎಂದು ದೃಢಪಟ್ಟ ನಾಲ್ಕು ಮಹಿಳೆಯರೂ ಸೇರಿದಂತೆ 16 ಮಂದಿ ಭಾರತೀಯರು ಸ್ವಯಂ ಕ್ವಾರಂಟೈನ್‌‌ಗೆ ಒಳಗಾಗಿದ್ದಾರೆ.ಇವರಲ್ಲಿ ಎಂಟು ಮಂದಿ ನ್ಯೂಯಾರ್ಕ್, ಮೂರು ಮಂದಿ ನ್ಯೂಜೆರ್ಸಿ, ಉಳಿದವರು ಟೆಕ್ಸಾಸ್ ಮತ್ತು ಕ್ಯಾಲಿಫೋರ್ನಿಯಾದ ಇತರೆ ರಾಜ್ಯಗಳಿಂದ ಬಂದವರು. ಇವರೆಲ್ಲಾ ಭಾರತದ ಉತ್ತರಾಖಂಡ, ಮಹಾರಾಷ್ಟ್ರ, ಕರ್ನಾಟಕ ಮತ್ತು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

ಅಮೆರಿಕಾದಲ್ಲಿ ಕೊರೊನಾ ಸೋಂಕು ತಗುಲಿರುವ ಭಾರತೀಯ ಪ್ರಜೆಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿ ಮತ್ತು ಸ್ಥಳೀಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಅಲ್ಲದೆ, ಭಾರತ-ಅಮೆರಿಕ ಸಂಘಸಂಸ್ಥೆಗಳು ನಿಕಟ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.