ADVERTISEMENT

Covid-19 World update | ಅಮೆರಿಕದಲ್ಲಿ 26 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 30 ಜೂನ್ 2020, 16:43 IST
Last Updated 30 ಜೂನ್ 2020, 16:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಾದ್ಯಂತ ದಿನೇದಿನೇ ಹೆಚ್ಚುತ್ತಿದ್ದು, ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 2,600,727 ತಲುಪಿದೆ. ಈವರೆಗೆ 126,307 ಮಂದಿ ಸಾವಿಗೀಡಾಗಿದ್ದಾರೆ.

ಪಾಕಿಸ್ತಾನದಲ್ಲಿ ಒಂದೇ ದಿನ 2846 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 118 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 209,337ಕ್ಕೆ ಏರಿಕೆಯಾಗಿದೆ. ಈವರೆಗೆ 4,304 ಜನ ಮೃತಪಟ್ಟಿದ್ದಾರೆ.

ಜಾನ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ,ಬ್ರೆಜಿಲ್‌ನಲ್ಲಿ ಈವರೆಗೆ 13.68 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 58,314 ಮಂದಿ ಅಸುನೀಗಿದ್ದಾರೆ. ರಷ್ಯಾದಲ್ಲಿ 6.46 ಲಕ್ಷಕ್ಕಿಂತಲೂ ಹೆಚ್ಚು ಜನರು ಸೋಂಕಿತರಾಗಿದ್ದು, 9,306 ಜನ ಮೃತಪಟ್ಟಿದ್ದಾರೆ. ಬ್ರಿಟನ್‌ನಲ್ಲಿ 3.14 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 43,815 ಜನ ಸಾವಿಗೀಡಾಗಿದ್ದಾರೆ.

ADVERTISEMENT

ಸ್ಪೇನ್‌ನಲ್ಲಿ 249,271 ಸೋಂಕಿತರು, 28,355 ಸಾವು; ಇಟಲಿಯಲ್ಲಿ 240,578 ಸೋಂಕಿತರು, 34,767 ಸಾವು, ಇರಾನ್‌ನಲ್ಲಿ 227,662 ಸೋಂಕಿತರು, 10,817 ಸಾವು ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.