ADVERTISEMENT

ಭ್ರಷ್ಟಾಚಾರ ಪ್ರಕರಣ: ಆಂಗ್ ಸಾನ್‌ ಸೂಕಿಗೆ ಐದು ವರ್ಷ ಜೈಲು ಶಿಕ್ಷೆ

ರಾಯಿಟರ್ಸ್
Published 27 ಏಪ್ರಿಲ್ 2022, 5:55 IST
Last Updated 27 ಏಪ್ರಿಲ್ 2022, 5:55 IST
ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ
ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ    

ಬ್ಯಾಂಕಾಕ್: ಮಿಲಿಟರಿ ಆಡಳಿತದ ಮ್ಯಾನ್ಮಾರ್‌ನಲ್ಲಿನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಅಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ಆಂಗ್ ಸಾನ್ ಸೂಕಿ (76) ವಿರುದ್ಧದ 11 ಭ್ರಷ್ಟಾಚಾರ ಪ್ರಕರಣಗಳ ಪೈಕಿ, ಒಂದೊಂದಾಗಿ ವಿಚಾರಣೆ ನಡೆಯುತ್ತಿದೆ.

ಹೋರಾಟಗಾರ್ತಿಯಾಗಿದ್ದ ಆಂಗ್ ಸಾನ್ ಸೂಕಿ ಅವರನ್ನು 2021ರಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ನಂತರದಲ್ಲಿ ಮಿಲಿಟರಿ ಆಡಳಿತ ಹೇರಲಾಗಿದೆ.

ADVERTISEMENT

ಆಂಗ್ ಸಾನ್ ಸೂಕಿ ವಿರುದ್ಧ ಕನಿಷ್ಠ 18 ವಿವಿಧ ಅಪರಾಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಗರಿಷ್ಠ 190 ವರ್ಷ ಜೈಲು ಶಿಕ್ಷೆಯಾಗಲಿದೆ.

ತಮ್ಮ ವಿರುದ್ಧದ ಆರೋಪಗಳನ್ನು ಸೂಕಿ ನಿರಾಕರಿಸುತ್ತಲೇ ಬಂದಿದ್ದು, ಅವುಗಳನ್ನು ಅಸಂಬದ್ಧ ಎಂದು ಕರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.