ADVERTISEMENT

ಹೊಸ ರೂಪಾಂತರ ವೈರಸ್‌ಗೆ ಲಸಿಕೆ ಕಡಿಮೆ ಪರಿಣಾಮಕಾರಿ: ಹೊಸ ಅಧ್ಯಯನ ವರದಿ

ಪಿಟಿಐ
Published 5 ಮಾರ್ಚ್ 2021, 8:27 IST
Last Updated 5 ಮಾರ್ಚ್ 2021, 8:27 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ವಾಷಿಂಗ್ಟನ್‌: ಕೊರೊನಾ ವೈರಸ್‌ನ ಹೊಸ ರೂಪಾಂತರಗಳು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರೋಗ ನಿರೋಧಕ ಆಧಾರಿತ ಔಷಧಗಳು ಮತ್ತು ಲಸಿಕೆಗಳು ಕಡಿಮೆ ಪರಿಣಾಮಕಾರಿಯಾಗಿವೆ ಎಂದು ಹೊಸ ಅಧ್ಯಯನ ವರದಿ ತಿಳಿಸಿದೆ.

ದಕ್ಷಿಣ ಆಫ್ರಿಕಾ, ಬ್ರಿಟನ್‌ ಮತ್ತು ಬ್ರೆಜಿಲ್‌ನಲ್ಲಿ ಪತ್ತೆಯಾದ ಕೊರೊನಾ ವೈರಸ್‌ನ ಹೊಸ ರೂಪಾಂತರಗಳು ವೇಗವಾಗಿ ಹಬ್ಬುತ್ತಿವೆ. ಈ ಹೊಸ ರೂಪಾಂತರಗಳೇ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತಿವೆ ಎಂದು ವರದಿ ವಿವರಿಸಿದೆ. ಈ ಬಗ್ಗೆ ‘ನೇಚರ್‌ ಮೆಡಿಸಿನ್‌’ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಿಸಲಾಗಿದೆ.

‘ಕೋವಿಡ್‌–19 ವಿರುದ್ಧ ಲಸಿಕೆ ಹಾಕಿಸಿಕೊಂಡಿದ್ದರೂ ಹೊಸ ರೂಪಾಂತರಗಳಿಂದ ರಕ್ಷಣೆ ದೊರೆಯುವ ಸಾಧ್ಯತೆಗಳು ಕಡಿಮೆಯಾಗಿವೆ’ ಎಂದು ಅಧ್ಯಯನ ತಂಡದಲ್ಲಿದ್ದ ವಾಷಿಂಗ್ಟನ್‌ ಯೂನಿರ್ವಸಿಟಿಯ ಸ್ಕೂಲ್‌ ಆಫ್‌ ಮೆಡಿಸಿನ್‌ನ ಮೈಕಲ್‌ ಎಸ್‌. ಡೈಮಂಡ್‌ ವಿವರಿಸಿದ್ದಾರೆ.

ADVERTISEMENT

‘ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ಪ್ರಮಾಣವು ವಯಸ್ಸಿಗೆ ತಕ್ಕಂತೆ ವ್ಯತ್ಯಾಸಗಳಾಗುತ್ತವೆ. ಜತೆಗೆ, ವ್ಯಕ್ತಿಯಿಂದ ವ್ಯಕ್ತಿಗೆ ಬೇರೆ, ಬೇರೆ ಕಾರಣಗಳು ಸಹ ಇರುತ್ತವೆ. ವಿಶೇಷವಾಗಿ ವಯಸ್ಸಾದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ’ ಎಂದು ಅವರು ವಿವರಿಸಿದ್ದಾರೆ.

‘ಈ ಹೊಸ ರೂಪಾಂತರಗಳು ಯಾವ ರೀತಿಯಲ್ಲಿ ಪರಿಣಾಮ ಬೀರುತ್ತಿವೆ ಎನ್ನುವುದು ಇನ್ನೂ ಖಚಿತವಾಗಿ ಗೊತ್ತಾಗಿಲ್ಲ. ಈ ಬಗ್ಗೆ ವಿಶ್ಲೇಷಣೆಯ ಅಧ್ಯಯನ ಅಗತ್ಯವಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.