ADVERTISEMENT

ಕೋವಿಡ್–19 ಸಾಂಕ್ರಾಮಿಕ ಎಂದು ಘೋಷಿಸಬಹುದು: ಟೆಡ್ರಾಸ್ ಅದನಾಂ

ಏಜೆನ್ಸೀಸ್
Published 11 ಮಾರ್ಚ್ 2020, 23:10 IST
Last Updated 11 ಮಾರ್ಚ್ 2020, 23:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಿನೀವಾ: ‘ಕೊರೊನಾ–2 ವೈರಸ್‌ ಸೋಂಕು ಹರಡುವಿಕೆ ತೀವ್ರವಾಗಿರುವುದರಿಂದ, ಕೋವಿಡ್–19 ಸಾಂಕ್ರಾಮಿಕ ಎಂದು ಘೋಷಿಸಬಹುದು’ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರಾಸ್ ಅದನಾಂ ಗೆಬ್ರೆಯಾಸಸ್ ಅವರು ಬುಧವಾರ ಘೋಷಿಸಿದ್ದಾರೆ.

‘ಸೋಂಕು ಹರಡುವಿಕೆ ತೀವ್ರವಾಗಿದೆ. ಅದರ ತಡೆಗೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿಲ್ಲ. ಇದು ಕಳವಳಕಾರಿ’ ಎಂದು ಅವರು ಹೇಳಿದರು.

‘ಮುಂದಿನ ದಿನಗಳಲ್ಲಿ, ಸೋಂಕು ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ಸೋಂಕಿನಿಂದ ಹೆಚ್ಚು ತತ್ತರಿಸಿರುವ ಇರಾನ್‌ನಲ್ಲಿ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಮತ್ತಷ್ಟು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.