ADVERTISEMENT

ಅಮೆರಿಕ: ನ್ಯೂಯಾರ್ಕ್‌ ನಗರದ ಶಾಲೆಗಳು ಪುನರಾರಂಭ

ಏಜೆನ್ಸೀಸ್
Published 7 ಡಿಸೆಂಬರ್ 2020, 8:23 IST
Last Updated 7 ಡಿಸೆಂಬರ್ 2020, 8:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನ್ಯೂಯಾರ್ಕ್‌: ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿರುವುದರಿಂದ ಸೋಮವಾರದಿಂದ ನ್ಯೂಯಾರ್ಕ್‌ ನಗರದಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗಿದೆ.

ಶಿಶುವಿಹಾರದಿಂದ ಐದನೇ ತರಗತಿಯ ಮಕ್ಕಳಿಗಾಗಿ ಮತ್ತೆ ಶಾಲೆಗಳನ್ನು ತೆರೆಯಲಾಗಿದೆ. ಪೋಷಕರು ಆನ್‌ಲೈನ್ ತರಗತಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಬಹುದು. ವಿಶೇಷ ಶಿಕ್ಷಣ ಅಗತ್ಯವಿರುವ ವಿದ್ಯಾರ್ಥಿಗಳಿಗಾಗಿ ಗುರುವಾರದಿಂದ ತರಗತಿ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನುರಜಾದಿನಗಳ ಬಳಿಕ ಪುನರಾರಂಭಿಸಲಾಗುವುದು. ಅಲ್ಲಿಯವರೆಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುವುದು ಎಂದು ಮೇಯರ್‌ ಬಿಲ್‌ ಡೆ ಬ್ಲಾಸಿಯೋ ಮಾಹಿತಿ ನೀಡಿದ್ದಾರೆ.

ADVERTISEMENT

ಈ ಹಿಂದೆ ನಗರದಲ್ಲಿ ಸತತ ಏಳು ದಿನಗಳ ಕಾಲ ಶೇಕಡ 3 ರಷ್ಟು ಪ್ರಕರಣಗಳು ವರದಿಯಾದ ಕಾರಣ ಶಾಲೆಗಳನ್ನು ಮುಚ್ಚುವಂತೆ ಮೇಯರ್‌ ಬಿಲ್‌ ಡೆ ಬ್ಲಾಸಿಯೋ ನವೆಂಬರ್‌ 18ರಂದು ಆದೇಶ ನೀಡಿದ್ದರು. ಈಗ ಶೇಕಡ 5 ರಷ್ಟು ಪ್ರಕರಣಗಳು ವರದಿಯಾಗಿವೆ. ಆದರೂ, ಶಾಲೆಗಳನ್ನು ಮರು ಆರಂಭಿಸಲು ಯಾವುದೇ ತೊಂದರೆ ಇಲ್ಲ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬ್ಲಾಸಿಯೋ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.