ADVERTISEMENT

Covid-19 World Update: ಬ್ರೆಜಿಲ್, ಭಾರತದಲ್ಲಿ ಅತಿಹೆಚ್ಚು ಸೋಂಕಿತರು ಗುಣಮುಖ

ಏಜೆನ್ಸೀಸ್
Published 24 ಆಗಸ್ಟ್ 2020, 16:16 IST
Last Updated 24 ಆಗಸ್ಟ್ 2020, 16:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನ್ಯೂಯಾರ್ಕ್‌: ಜಗತ್ತಿನಾದ್ಯಂತ ಕೋವಿಡ್–19 ಸೋಂಕಿನಿಂದ ಇದುವರೆಗೆ ಒಟ್ಟು 1.51ಕೋಟಿಸೋಂಕಿತರು ಗುಣಮುಖರಾಗಿದ್ದಾರೆ. ಬ್ರೆಜಿಲ್‌ ಹಾಗೂ ಭಾರತದಲ್ಲಿ ಕ್ರಮವಾಗಿ29.48 ಲಕ್ಷ ಮತ್ತು23.38 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ ಎಂದುಜಾನ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್‌ ರಿಸೋರ್ಸ್‌ ಸೆಂಟರ್ ಮಾಹಿತಿ ನೀಡಿದೆ.

ಅತಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಎರಡನೇಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ ಇದುವರೆಗೆ ಒಟ್ಟು36,05,783 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ29,48,815 ಸೋಂಕಿತರು ಮೃತಪಟ್ಟಿದ್ದಾರೆ. ಉಳಿದಂತೆ 1,14,744 ಮಂದಿ ಮೃತಪಟ್ಟಿದ್ದಾರೆ.

ವಿವಿಯ ಮಾಹಿತಿ ಪ್ರಕಾರಬ್ರೆಜಿಲ್‌ ನಂತರದ ಸ್ಥಾನದಲ್ಲಿ ಭಾರತ ಇದೆ. ಭಾರತದಲ್ಲಿ ಈ ವರೆಗೆ ಒಟ್ಟು31,06,348ಪ್ರಕರಣಗಳು ವರದಿಯಾಗಿವೆ. ಇದರಲ್ಲಿ23,38,035 ಮಂದಿ ಗುಣಮುಖರಾಗಿದ್ದಾರೆ. 57,542 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಅಮೆರಿಕದಲ್ಲಿ ಇದುವರೆಗೆ ಒಟ್ಟು 57,06,449 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 19,97,761 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ1,76,819 ಮಂದಿ ಮೃತಪಟ್ಟಿದ್ದಾರೆ.

ಜಗತ್ತಿನಾದ್ಯಂತ ಇದುವರೆಗೆ ಒಟ್ಟು 2,34,72,067ಜನರಿಗೆ ಸೋಂಕು ತಗುಲಿದೆ. ಇದರಲ್ಲಿ8,09,747 ಮಂದಿ ಮೃತಪಟ್ಟಿದ್ದಾರೆ. ಹಾಗೂ1,51,69,748 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.