ADVERTISEMENT

Covid-19 World Update:2.59 ಕೋಟಿ ಸೋಂಕಿತರು, ಅಮೆರಿಕದಲ್ಲಿ ನವೆಂಬರ್‌ಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 4:34 IST
Last Updated 3 ಸೆಪ್ಟೆಂಬರ್ 2020, 4:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು ಅಮೆರಿಕದಲ್ಲಿ ನವೆಂಬರ್‌ ತಿಂಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ಶ್ವೇತಭನದ ಅಧಿಕೃತ ಮೂಲಗಳು ತಿಳಿಸಿವೆ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್‌ ಸೆಂಟರ್ ಪ್ರಕಾರ, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 2,59,37,029ಗೆ ಮುಟ್ಟಿದ್ದು, 8,61,668 ಮಂದಿ ಮೃತಪಟ್ಟಿದ್ದಾರೆ. 1,72,12,679 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 61,13,182 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 1,85,707 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 22,31,757 ಜನರು ಈವರೆಗೆ ಗುಣಮುಖರಾಗಿದ್ದಾರೆ.

ADVERTISEMENT

ಭಾರತ ಮತ್ತು ಬ್ರೆಜಿಲ್‌ನಲ್ಲಿ ಏರುತ್ತಿರುವ ಸೋಂಕಿನ ಪ್ರಮಾಣ

ಭಾರತ ಮತ್ತು ಬ್ರೆಜಿಲ್‌ನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಏರಿಕೆ ಕಾಣುತ್ತಿವೆ. ಬ್ರೆಜಿಲ್‌ನಲ್ಲಿ 3,997,865 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಮೃತರ ಸಂಖ್ಯೆ 1,23,780ಕ್ಕೆ ತಲುಪಿದೆ. ಭಾರತದಲ್ಲಿ 37,69,523ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.