ADVERTISEMENT

Covid-19 World Update | 1.13 ಕೋಟಿ ಸೋಂಕಿತರು ಗುಣಮುಖ; 7 ಲಕ್ಷ ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2020, 16:29 IST
Last Updated 6 ಆಗಸ್ಟ್ 2020, 16:29 IST
   

ವಾಷಿಂಗ್ಟನ್:ಜಗತ್ತಿನಾದ್ಯಂತ ಇದುವರೆಗೆ ಒಟ್ಟು 1,88,60,908ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಇದರಲ್ಲಿ 1,13,94,076 ಸೋಂಕಿತರು ಗುಣಮುಖರಾಗಿದ್ದಾರೆ.7,08,676 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ಸಂಪನ್ಮೂಲ ಕೇಂದ್ರ ಮಾಹಿತಿ ನೀಡಿದೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈ ವರೆಗೆ 48,26,861 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ 15,77,851 ಸೋಂಕಿತರು ಗುಣಮುಖರಾಗಿದ್ದು, 15,8,445 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕ ನಂತರ ಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿರುವ ಬ್ರೆಜಿಲ್‌ನಲ್ಲಿ 28,59,073ಪ್ರಕರಣಗಳು ಬೆಳಕಿಗೆ ಬಂದಿವೆ. 21,90,361 ಸೋಂಕಿತರು ಗುಣಮುಖರಾಗಿದ್ದು, 97,256ಜನರು ಮೃತಪಟ್ಟಿದ್ದಾರೆ.

ADVERTISEMENT

ರಷ್ಯಾದಲ್ಲಿ 870,187, ದಕ್ಷಿಣ ಆಫ್ರಿಕಾದಲ್ಲಿ 5,29,877, ಮೆಕ್ಸಿಕೋದಲ್ಲಿ4,56,100, ಪೆರುವಿನಲ್ಲಿ 4,47,624, ಚಿಲಿಯಲ್ಲಿ3,64,723 ಪ್ರಕರಣಗಳು ವರದಿಯಾಗಿವೆ.

ಜಗತ್ತಿನಲ್ಲೇ ಮೊದಲು ಸೋಂಕು ಕಾಣಿಸಿಕೊಂಡ ಚೀನಾದಲ್ಲಿ ಈ ವರೆಗೆ88,423 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ4,678 ಸೋಂಕಿತರು ಮೃತಪಟ್ಟಿದ್ದು,81,563 ಗುಣಮುಖರಾಗಿದ್ದಾರೆ. ಇನ್ನು ಕೇವಲ2,182 ಸಕ್ರಿಯ ಪ್ರಕರಣಗಳು ಇವೆ ಎಂದು ವರದಿಯಾಗಿದೆ.

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ 2,81,863 ಪ್ರಕರಣಗಳು ದೃಢಪಟ್ಟಿದ್ದು,2,56,058 ಸೋಂಕಿತರು ಗುಣಮುಖರಾಗಿದ್ದಾರೆ. 6,035ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.ಇಂಗ್ಲೆಂಡ್‌ನಲ್ಲಿ 3,07,272, ಸ್ಪೇನ್‌ನಲ್ಲಿ 3,05,767 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೋವಿಡ್‌ನಿಂದಾಗಿ ಇಂಗ್ಲೆಂಡ್‌ನಲ್ಲಿ 46,295, ಮೆಕ್ಸಿಕೊದಲ್ಲಿ 49,698, ಇಟಲಿಯಲ್ಲಿ 35,1, ಪ್ರಾನ್ಸ್‌ನಲ್ಲಿ 30,268, ಸ್ಪೇನ್‌ನಲ್ಲಿ 28,499, ಪೆರುವಿನಲ್ಲಿ 20,228, ಇರಾನ್‌ನಲ್ಲಿ17,976, ರಷ್ಯಾದಲ್ಲಿ 14,579, ಚಿಲಿಯಲ್ಲಿ 9,792 ಮತ್ತು ದಕ್ಷಿಣ ಆಫ್ರಿಕಾದಲ್ಲಿ 9,298 ಜನರು ಸಾವಿಗೀಡಾಗಿದ್ದಾರೆ.

ಭಾರತದಲ್ಲಿ ಕೋವಿಡ್–19
ಭಾರತದಲ್ಲಿ ಈವರೆಗೆ 19,64,536ಜನರಿಗೆ ಸೋಂಕು ತಗುಲಿದೆ. ಸಾವಿನ ಸಂಖ್ಯೆ 40,699ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಒಟ್ಟು 13,28,336 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದುವಿವಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.