ADVERTISEMENT

Covid-19 World Updates: ಅಮೆರಿಕದಲ್ಲಿ ಸಾವಿನ ಸಂಖ್ಯೆ 3 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 5:27 IST
Last Updated 12 ಡಿಸೆಂಬರ್ 2020, 5:27 IST
   

ವಾಷಿಂಗ್ಟನ್‌: ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಕೋವಿಡ್–19ನಿಂದಾಗಿ ಮೃತಪಟ್ಟವರ ಸಂಖ್ಯೆ 3 ಲಕ್ಷ ದಾಟಿದೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿಮಾಡಿದೆ.

ಅಮೆರಿಕದಲ್ಲಿ ಈವರೆಗೆ 1.62 ಕೋಟಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 95.07 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 3,02,750ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ 64.85 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 27,324 ಜನರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 98.27 ಲಕ್ಷ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1.42 ಲಕ್ಷ ಸೋಂಕಿತರು ಮೃತಪಟ್ಟು, 93.24 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 3.60 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ.

ADVERTISEMENT

ಬ್ರೆಜಿಲ್‌ನಲ್ಲಿ 68.36 ಲಕ್ಷ, ರಷ್ಯಾದಲ್ಲಿ 25.97 ಲಕ್ಷ, ಫ್ರಾನ್ಸ್‌ನಲ್ಲಿ 23.51 ಲಕ್ಷ ಪ್ರಕರಣಗಳು ದಾಖಲಾಗಿವೆ.

ಪ್ರಪಂಚದಾದ್ಯಂತ ಕಳೆದ 24 ಅವಧಿಯಲ್ಲಿ ಹೊಸದಾಗಿ 7.02 ಲಕ್ಷ ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, 12,350 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 7.14 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16 ಲಕ್ಷದ ಗಡಿ ದಾಟಿದೆ.

16 ಲಕ್ಷ ಸೋಂಕಿತರ ಸಾವು
ಕೋವಿಡ್‌ನಿಂದಾಗಿ ಪ್ರಪಂಚದಾದ್ಯಂತ ಮೃತಪಟ್ಟವರ ಸಂಖ್ಯೆ 16.01 ಲಕ್ಷಕ್ಕೆ ಏರಿಕೆಯಾಗಿವೆ. ಇನ್ನೂ 2.01 ಕೋಟಿ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1.06 ಲಕ್ಷ ಸೋಂಕಿತರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರು ಮೃತಪಟ್ಟ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್‌ (1.80 ಲಕ್ಷ) ಎರಡನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನದಲ್ಲಿ ಭಾರತ (1.42 ಲಕ್ಷ) ಇದೆ. ಉಳಿದಂತೆ ಇಂಗ್ಲೆಂಡ್‌ (63 ಸಾವಿರ), ಇಟಲಿ (63 ಸಾವಿರ) ಹಾಗೂ ಫ್ರಾನ್ಸ್‌ನಲ್ಲಿ (57 ಸಾವಿರ) 50 ಸಾವಿರಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.