ADVERTISEMENT

Covid-19 World Update: ವಿಶ್ವದಾದ್ಯಂತ 3.16 ಲಕ್ಷ ದಾಟಿದ ಸಾವಿನ ಸಂಖ್ಯೆ

ಏಜೆನ್ಸೀಸ್
Published 18 ಮೇ 2020, 10:13 IST
Last Updated 18 ಮೇ 2020, 10:13 IST
   

ನವದೆಹಲಿ: ಜಾಗತಿಕ ಪಿಡುಗು ಕೋವಿಡ್‌–19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದ್ದು, ವಿಶ್ವದಾದ್ಯಂತ ಇದುವರೆಗೆ 3,16,658 ಜನರು ಮೃತಪಟ್ಟಿದ್ದಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.

ವಿಶ್ವದ 213 ರಾಷ್ಟ್ರಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 48 ಲಕ್ಷ ದಾಟಿದೆ. ಸುಮಾರು 18.57 ಲಕ್ಷ ಜನರು ಗುಣಮುಖರಾಗಿದ್ದಾರೆ. ಉಳಿದಂತೆ 26 ಲಕ್ಷ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 15.27 ಲಕ್ಷ ದಾಟಿದ್ದು, ಮೃತಪಟ್ಟವರ ಸಂಖ್ಯೆ 90 ಸಾವಿರಕ್ಕೆ ಏರಿಕೆಯಾಗಿದೆ. 3.46 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.ರಷ್ಯಾದಲ್ಲಿ ಇದುವರೆಗೆ 2.81 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಅದರಲ್ಲಿ, 2,631 ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಸ್ಪೇನ್‌ನಲ್ಲಿ ಸೋಂಕಿತರ ಸಂಖ್ಯೆ 2.77 ದಾಟಿದ್ದು 27 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಇಂಗ್ಲೆಂಡ್‌ ಹಾಗೂ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 2.4ಲಕ್ಷಕ್ಕೆ ಏರಿಕೆಯಾಗಿದ್ದು, ಈ ದೇಶಗಳಲ್ಲಿ ಕ್ರಮವಾಗಿ 34 ಸಾವಿರ ಮತ್ತು 16 ಸಾವಿರ ಜನರು ಮೃತಪಟ್ಟಿದ್ದಾರೆ.

ಕೊರೊನಾವೈರಸ್‌ ಮೊದಲು ಕಾಣಿಸಿಕೊಂಡ ಚೀನಾದಲ್ಲಿ ಈವರೆಗೆ82,947ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ದೇಶದಲ್ಲಿ4,633 ಜನರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ 96,169ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು 36,823 ಜನರು ಗುಣಮುಖರಾಗಿದ್ದು, 3,029 ಸೋಂಕಿತರುಸಾವನ್ನಪ್ಪಿದ್ದಾರೆ. ಉಳಿದಂತೆ 56,316 ಸೋಂಕಿತರು ದೇಶದಾದ್ಯಂತ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.