ADVERTISEMENT

Covid-19 World Update: ಅಮೆರಿಕದಲ್ಲಿ 78932, ಬ್ರಿಟನ್‌ನಲ್ಲಿ 31930 ಸಾವು

ಪಾಕಿಸ್ತಾನದಲ್ಲಿ ಲಾಕ್‌ಡೌನ್ ಸಡಿಲಿಕೆ

ಏಜೆನ್ಸೀಸ್
Published 10 ಮೇ 2020, 17:14 IST
Last Updated 10 ಮೇ 2020, 17:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಂಡನ್/ವಾಷಿಂಗ್ಟನ್:ಜಪಾನ್‌ನಲ್ಲಿರುವ ಆಸ್ಪತ್ರೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಕೋವಿಡ್ ರೋಗಿಗಳಿದ್ದಾರೆ ಎಂದು ಜಪಾನ್ ಆರೋಗ್ಯ ಸಚಿವಾಲಯ ಹೇಳಿದೆ .ಇಲ್ಲಿಯವರೆಗೆ 1,832 ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಗಳಲ್ಲಿ ಶೇ.91.6ರಷ್ಟು ಹಾಸಿಗೆಗಳನ್ನು ಅವರಿಗಾಗಿ ಮೀಸಲಿರಿಸಲಾಗಿತ್ತು. ಇದೀಗ ಎಲ್ಲವೂ ಭರ್ತಿಯಾಗಿದೆ ಎಂದು ಸಚಿವಾಲಯ ಹೇಳಿದೆ.

ಜಾನ್ ಹಾಪ್ಕಿನ್ಸ್ ಕೊರೊನಾವೈರಸ್ ರಿಸೋರ್ಸ್ ಸೆಂಟರ್ ಪ್ರಕಾರ ಜಗತ್ತಿನಾದ್ಯಂತ ಕೋವಿಡ್ ರೋಗದಿಂದ ಸಾವಿಗೀಡಾದವರ ಸಂಖ್ಯೆ 280507 ಆಗಿದೆ. ಅಮೆರಿಕದಲ್ಲಿ ಈವರೆಗೆ 78932 ಮಂದಿ ಸಾವಿಗೀಡಾಗಿದ್ದಾರೆ. ಬ್ರಿಟನ್‌ನಲ್ಲಿ31,930 ಮಂದಿ ಸಾವಿಗೀಡಾಗಿದ್ದು, ಇಟಲಿಯಲ್ಲಿ 30,560 ಮಂದಿ ಸಾವಿಗೀಡಾಗಿದ್ದಾರೆ.

ವಿಶ್ವದಾದ್ಯಂತ ಇಲ್ಲಿಯವರೆಗೆ 4067112 ಕೊರೊನಾವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಅಮೆರಿಕದಲ್ಲಿ 1314799, ಸ್ಪೇನ್-223578, ಬ್ರಿಟನ್-220449, ಇಟಲಿ-219070 ಪ್ರಕರಣಗಳು ವರದಿಯಾಗಿದೆ.

ADVERTISEMENT

ಅಮೆರಿಕದಲ್ಲಿ ಈವರೆಗೆ 1,309,168 ಜನರಿಗೆ ಸೋಂಕು ತಗುಲಿದ್ದು, 78,794 ಜನ ಸಾವಿಗೀಡಾಗಿದ್ದಾರೆ. ನ್ಯೂಯಾರ್ಕ್‌ನಲ್ಲೇ 26,563 ಸಾವು ಸಂಭವಿಸಿದೆ. ಶ್ವೇತಭವನದ ಮೂವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಮೈಕ್ ಪೆನ್ಸ್ ಸೇರಿದಂತೆ ಶ್ವೇತಭವನದ ಎಲ್ಲರೂ ಪ್ರತಿ ದಿನ ಕೊರೊನಾ ಪತ್ತೆ ಪರೀಕ್ಷೆಗೆ ಒಳಪಡುತ್ತಿದ್ದಾರೆ.

ಪಾಕಿಸ್ತಾನದಲ್ಲಿ ಲಾಕ್‌ಡೌನ್ ಸಡಿಲ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಪಾಕಿಸ್ತಾನವು ಸಡಿಲ ಮಾಡಿದೆ. ದೇಶದಲ್ಲಿ 24 ಗಂಟೆಗಳಲ್ಲಿ 1,080 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,795 ತಲುಪಿದೆ. ಈವರೆಗೆ 636 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.