ADVERTISEMENT

Covid-19 World Update: ಅಮೆರಿಕದಲ್ಲಿ ಒಂದೇ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣ

ಏಜೆನ್ಸೀಸ್
Published 6 ನವೆಂಬರ್ 2020, 1:59 IST
Last Updated 6 ನವೆಂಬರ್ 2020, 1:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ವೈರಸ್ ಸೋಂಕು ತಗುಲುತ್ತಿರುವವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಒಂದೇ ದಿನ 1,15,914 ಮಂದಿ ಸೋಂಕಿತರಾಗಿದ್ದು, 1,118 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕದಲ್ಲಿ ಈವರೆಗೆ 99.17 ಲಕ್ಷ ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 2.40 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. 63.40 ಲಕ್ಷಕ್ಕೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ವರ್ಲ್ಡೋಮೀಟರ್ ವೆಬ್‌ಸೈಟ್ ಅಂಕಿಅಂಶ ಪ್ರಕಾರ, ವಿಶ್ವದಾದ್ಯಂತ ಈವರೆಗೆ 4.9 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 12.38 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದು, 3.4 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ADVERTISEMENT

ಭಾರತದಲ್ಲಿ 5,21,242, ಬ್ರೆಜಿಲ್‌ನಲ್ಲಿ 3,88,135, ರಷ್ಯಾದಲ್ಲಿ 4,04,180, ಫ್ರಾನ್ಸ್‌ನಲ್ಲಿ 14,38,052 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.