ADVERTISEMENT

Covid-19 World Update: ವಿಶ್ವದಾದ್ಯಂತ 3 ಕೋಟಿಗೂ ಅಧಿಕ ಮಂದಿ ಗುಣಮುಖ

ಏಜೆನ್ಸೀಸ್
Published 25 ಅಕ್ಟೋಬರ್ 2020, 16:33 IST
Last Updated 25 ಅಕ್ಟೋಬರ್ 2020, 16:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ವಾಷಿಂಗ್ಟನ್: ವಿಶ್ವದಾದ್ಯಂತ ಭಾನುವಾರದ ವೇಳೆಗೆ 3,17,48,203 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ಜಗತ್ತಿನಲ್ಲಿ ಈವರೆಗೆ 4,30,96,130 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದುವರೆಗೆ 11,56,521 ಮಂದಿ ಸಾವಿಗೀಡಾಗಿದ್ದಾರೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 88.38 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದರೆ, 2.30 ಲಕ್ಷಕ್ಕೂ ಹೆಚ್ಚು ಜನ ಈವರೆಗೆ ಮೃತಪಟ್ಟಿದ್ದಾರೆ. ಸದ್ಯ 28.66 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಷ್ಯಾದಲ್ಲಿ 16,710 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15,13,877ಕ್ಕೆ ಏರಿಕೆಯಾಗಿದೆ.

ಇಟಲಿಯಲ್ಲಿ 21,273 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5,25,782ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.