ADVERTISEMENT

Covid-19 World Update: ವಿಶ್ವದಾದ್ಯಂತ 4.29 ಕೋಟಿ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 25 ಅಕ್ಟೋಬರ್ 2020, 2:42 IST
Last Updated 25 ಅಕ್ಟೋಬರ್ 2020, 2:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿತರಾದವರ ಸಂಖ್ಯೆ ಭಾನುವಾರ ಬೆಳಿಗ್ಗೆ ವೇಳೆಗೆ 4.29 ಕೋಟಿ ದಾಟಿದೆ.

ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ಜಗತ್ತಿನಲ್ಲಿ ಈವರೆಗೆ 11.54 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 3.16 ಕೋಟಿಗೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 88.27 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದರೆ, 2.30 ಲಕ್ಷಕ್ಕೂ ಹೆಚ್ಚು ಜನ ಈವರೆಗೆ ಮೃತಪಟ್ಟಿದ್ದಾರೆ. ಸದ್ಯ 28.56 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.