ADVERTISEMENT

Covid-19 World Update: ಜಗತ್ತಿನಾದ್ಯಂತ 2.55 ಕೋಟಿ ಸಕ್ರಿಯ ಕೋವಿಡ್ ಪ್ರಕರಣಗಳು

ಏಜೆನ್ಸೀಸ್
Published 10 ಫೆಬ್ರುವರಿ 2021, 3:26 IST
Last Updated 10 ಫೆಬ್ರುವರಿ 2021, 3:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾಷಿಂಗ್ಟನ್‌: ಜಗತ್ತಿನಾದ್ಯಂತ ಬುಧವಾರದ ವೇಳೆ 2.55 ಕೋಟಿ ಕೋವಿಡ್‌ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ ಈವರೆಗೂ 23.50 ಲಕ್ಷ ಮಂದಿ ಸಾವಿಗೀಡಾಗಿದ್ದು, 7.93 ಕೋಟಿ ಜನರು ಗುಣಮುಖರಾಗಿದ್ದಾರೆ.

ವರ್ಲ್ಡೋಮೀಟರ್ ಪ್ರಕಾರ ವಿಶ್ವದಾದ್ಯಂತ 10,74,01,845 ಕೊರೊನಾ ವೈರಸ್‌ ಪ್ರಕರಣಗಳು ದೃಢಪಟ್ಟಿವೆ.

ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ಅಮೆರಿಕದಲ್ಲಿ 9.68 ಲಕ್ಷ ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 2,77,99,946 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 4,79,772 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ADVERTISEMENT

ಇನ್ನು ಭಾರತದಲ್ಲಿ 1,08,58,300 ಬ್ರೆಜಿಲ್‌ನಲ್ಲಿ 96,02,034, ರಷ್ಯಾದಲ್ಲಿ 39,98,216, ಬ್ರಿಟನ್‌ನಲ್ಲಿ 39,72,148 ಹಾಗೂ ಫ್ರಾನ್ಸ್‌ನಲ್ಲಿ 33,60,235 ಪ್ರಕರಣಗಳು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.