ADVERTISEMENT

ಕೋವಿಡ್‌–19: ಭಾರತವೂ ಸೇರಿ ವಿದೇಶಿಗರಿಗೆ ಪ್ರವೇಶ ನಿರ್ಬಂಧಿಸಿದ ಬಾಂಗ್ಲಾ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 4:40 IST
Last Updated 16 ಮಾರ್ಚ್ 2020, 4:40 IST
   

ಢಾಕಾ: ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್‌ ಸೋಂಕು ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಹಲವು ದೇಶಗಳ ಪ್ರಯಾಣಿಕರಿಗೆ 16 ದಿನಗಳ ಕಾಲ ನಿರ್ಬಂಧ ಹೇರಿ ಬಾಂಗ್ಲಾ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಸೋಮವಾರ ಮಧ್ಯರಾತ್ರಿಯಿಂದ ಈ ನಿಷೇಧ ಜಾರಿಗೆ ಬರಲಿದೆ.

ADVERTISEMENT

ಭಾರತ, ಸೌದಿ ಅರೇಬಿಯಾ, ಕುವೈತ್ ಮತ್ತು ಕತಾರ್ ಸೇರಿದಂತೆ ಯುರೋಪಿನ ಹಲವು ದೇಶಗಳ ನಾಗರಿಕರಿಗೆ ಬಾಂಗ್ಲಾ ಪ್ರವೇಶ ನಿರ್ಬಂಧಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.