ADVERTISEMENT

ಕೆನಡಾದಲ್ಲೂ ಪತ್ತೆಯಾದ ಓಮಿಕ್ರಾನ್‌ ಸೋಂಕು ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ನವೆಂಬರ್ 2021, 4:51 IST
Last Updated 29 ನವೆಂಬರ್ 2021, 4:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಒಟ್ಟಾವ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮಿಕ್ರಾನ್‌ನ ಎರಡು ಸೋಂಕು ಪ್ರಕರಣಗಳು ಕೆನಡಾದಲ್ಲೂ ಪತ್ತೆಯಾಗಿವೆ ಎಂದು ಅಲ್ಲಿನಸಾರ್ವಜನಿಕ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಕೆನಾಡದ ರಾಜಧಾನಿ ಒಟ್ಟಾವದಲ್ಲಿ ನೆಲೆಸಿರುವ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಇಬ್ಬರು ವ್ಯಕ್ತಿಗಳು ನೈಜೀರಿಯಾದಿಂದ ವಾಪಾಸಾಗಿದ್ದರು ಎಂದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮಿಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ADVERTISEMENT

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.