ತೆಹರಾನ್: ಕೊರೊನಾ ವೈರಸ್ ಸೋಂಕಿನಿಂದ ಇರಾನ್‌ನಲ್ಲಿ ಹೊಸದಾಗಿ ಸತ್ತವರ ಸಂಖ್ಯೆ 122ಕ್ಕೆ ಏರಿದ್ದು, ಒಟ್ಟು 4,232 ಜನರುಬಲಿಯಾಗಿದ್ದಾರೆ.
ಮಧ್ಯಪ್ರಾಚ್ಯ ದೇಶಗಳ ಪೈಕಿ ಇರಾನ್‌ನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸಂಬಂಧಿತ ಸಾವುಗಳು ಸಂಭವಿಸಿವೆ.
ಕಳೆದ 24 ಗಂಟೆಗಳಲ್ಲಿ 1,972 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಒಟ್ಟು 68,192 ಜನರು ಕೊರೊನಾ ಸೋಂಕು ಪೀಡಿತರಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಇರಾನ್ ಆರೋಗ್ಯ ಸಚಿವಾಲಯ, 'ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದ್ದು ಆತಂಕಕಾರಿಯಾಗಿದೆ. ತೆಹರಾನ್ ಸೇರಿದಂತೆ ಎಂಟು ಪ್ರವಾಸಿ ಪ್ರಾಂತ್ಯಗಳಲ್ಲಿ ಅಧಿಕ ಪ್ರಕರಣಗಳು ಪತ್ತೆಯಾಗಿವೆ' ಎಂದು ಸ್ಪಷ್ಟಪಡಿಸಿದೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿನೆಮಾ ಮಂದಿರ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜುಗಳು ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಿಗೆ ಜನರು ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.