ADVERTISEMENT

Covid-19 World Update: 5.18 ಕೋಟಿಗೂ ಅಧಿಕ ಸೋಂಕಿತರು

ಏಜೆನ್ಸೀಸ್
Published 16 ಡಿಸೆಂಬರ್ 2020, 3:55 IST
Last Updated 16 ಡಿಸೆಂಬರ್ 2020, 3:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 7.38 ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 5.18 ಕೋಟಿ ಸೋಂಕಿತರು ಗುಣಮುಖರಾಗಿದ್ದು, 16.64 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 5,18,14,665ಕ್ಕೆ ತಲುಪಿದ್ದು, 16,41,452 ಸೋಂಕಿತರು ಸಾವಿಗೀಡಾಗಿದ್ದಾರೆ. ಒಟ್ಟಾರೆ 2,03,47,506 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,17,883 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಮೃತಪಟ್ಟವರ ಸಂಖ್ಯೆ 3,11,068ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 99,32,908 ಲಕ್ಷ ಪ್ರಕರಣಗಳು ವರದಿಯಾಗಿವೆ.

ADVERTISEMENT

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 69.74 ಲಕ್ಷ, ಫ್ರಾನ್ಸ್‌ನಲ್ಲಿ 23.91 ಲಕ್ಷ, ರಷ್ಯಾದಲ್ಲಿ 27.07 ಲಕ್ಷ, ಸ್ಪೇನ್‌ನಲ್ಲಿ 17.71 ಲಕ್ಷಕ್ಕೆ ಏರಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.