ADVERTISEMENT

Covid-19 World Update: ಜಗತ್ತಿನಾದ್ಯಂತ 78.85 ಲಕ್ಷ ಸಕ್ರಿಯ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಅಕ್ಟೋಬರ್ 2020, 16:44 IST
Last Updated 7 ಅಕ್ಟೋಬರ್ 2020, 16:44 IST
ಕೋವಿಡ್‌- ಸಾಂಕೇತಿಕ ಚಿತ್ರ
ಕೋವಿಡ್‌- ಸಾಂಕೇತಿಕ ಚಿತ್ರ   
""
""
""

ವಾಷಿಂಗ್ಟನ್: ಜಗತ್ತಿನಾದ್ಯಂತ 3.61 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10.56 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 2.72 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 78,85,180 ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 77,34,213 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಈವರೆಗೂ 2,16,106 ಮಂದಿ ಸಾವಿಗೀಡಾಗಿದ್ದಾರೆ. 49,52,216 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ADVERTISEMENT

ಭಾರತದಲ್ಲಿ 67,64,710, ಬ್ರೆಜಿಲ್‌ನಲ್ಲಿ 49,70,953, ರಷ್ಯಾದಲ್ಲಿ 12,48,619, ಕೊಲಂಬಿಯಾದಲ್ಲಿ 8,69,808, ಪೆರುವಿನಲ್ಲಿ 8,32,929, ಇಂಗ್ಲೆಂಡ್‌ನಲ್ಲಿ 5,44,275, ಸ್ಪೇನ್‌ನಲ್ಲಿ 8,65,631 ಮತ್ತು ದಕ್ಷಿಣ ಆಫ್ರಿಕಾದಲ್ಲಿ 6,83,242 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.