ಕೊಲಂಬೊ: ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತದಿಂದ ಪ್ರಯಾಣಿಕರು ದೇಶದೊಳಕ್ಕೆ ಪ್ರವೇಶಿಸದಂತೆ ಶ್ರೀಲಂಕಾ ನಿರ್ಬಂಧ ವಿಧಿಸಿದೆ.
ಬ್ರಿಟನ್, ಯುಎಇ, ಆಸ್ಟ್ರೇಲಿಯಾ, ಸಿಂಗಪುರ ಸೇರಿದಂತೆ ಹಲವು ದೇಶಗಳು ಈಗಾಗಲೇ ಭಾರತ ಮತ್ತು ದಕ್ಷಿಣ ಏಷ್ಯಾ ದೇಶಗಳ ಪ್ರಯಾಣಿಕರ ಮೇಲೆ ನಿರ್ಬಂಧ ಹೇರಿದೆ.
‘ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಿಂದ ಆಗಮಿಸುವ ಪ್ರಯಾಣಿಕರು ಶ್ರೀಲಂಕಾ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ನಿಯಮ ತಕ್ಷಣದಿಂದಲೇ ಜಾರಿಗೆ ಬರಲಿದೆ’ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರವು ಗುರುವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.