ವಿಶ್ವಸಂಸ್ಥೆ: ಜಾಗತಿಕವಾಗಿ ಕೆಲವು ದೇಶಗಳು ಕೋವಿಡ್ ಲಸಿಕೆಯ ರಫ್ತಿನ ಮೇಲೆ ನಿರ್ಬಂಧ ವಿಧಿಸಿರುವುದರಿಂದಬಡದೇಶಗಳಿಗೆ ಸಂಕಷ್ಟ ಎದುರಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಜೂನ್ ಕೊನೆಯವರೆಗೂ ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೆಲವು ದೇಶಗಳು ಕೋವಿಡ್ ಲಸಿಕೆಯ ರಫ್ತನ್ನು ನಿಷೇಧಿಸಿವೆ. ಕಳೆದ ಎರಡು ವಾರಗಳಲ್ಲಿ ಕೇವಲ 20ಲಕ್ಷ ಡೋಸೆಜ್‌ಗಳು 90 ದೇಶಗಳಿಗೆ ರಫ್ತಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಭಾರತದಲ್ಲಿ ಸೀರಂ ಕಂಪನಿ ಉತ್ಪಾದಿಸುವ ಕೋವಿಡ್ ಲಸಿಕೆಗಳ ಮೇಲಿನ ರಫ್ತಿಗೆ ಭಾರತ ಸರ್ಕಾರ ನಿರ್ಬಂಧ ವಿಧಿಸಿದರೆ ಸುಮಾರು 80ಕ್ಕೂ ಹೆಚ್ಚು ದೇಶಗಳಿಗೆ ಸಂಕಷ್ಟ ಎದುರಾಗಲಿದೆ. ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಬಡ ದೇಶಗಳ ಆತಂಕಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.