ADVERTISEMENT

ಕಳೆದ ವಾರ ಜಾಗತಿಕವಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಶೇ 21ರಷ್ಟು ಹೆಚ್ಚಳ

ಏಜೆನ್ಸೀಸ್
Published 28 ಜುಲೈ 2021, 14:35 IST
Last Updated 28 ಜುಲೈ 2021, 14:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಜಿನೀವಾ: ಕಳೆದ ವಾರ ಜಾಗತಿಕವಾಗಿ ಕೋವಿಡ್ ಪಿಡುಗಿನಿಂದ ಮೃತಪಟ್ಟವರ ಸಂಖ್ಯೆ ಶೇ 21ರಷ್ಟು ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

ಒಟ್ಟು 69 ಸಾವಿರ ಮಂದಿ ಈ ಅವಧಿಯಲ್ಲಿ ಮೃತಪಟ್ಟಿದ್ದು, ಹೆಚ್ಚಿನ ಸಾವುಗಳು ಅಮೆರಿಕ ಮತ್ತು ದಕ್ಷಿಣ ಏಷ್ಯಾದಲ್ಲಿ ಸಂಭವಿಸಿವೆ. ವಿಶ್ವದಾದ್ಯಂತ ಕೋವಿಡ್‌ ಪ್ರಕರಣಗಳ ಪ್ರಮಾಣ ಶೇ 8ರಷ್ಟು ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 19.40 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಮುಂದಿನ ಎರಡು ವಾರಗಳಲ್ಲಿ ಜಾಗತಿಕವಾಗಿ ಸೋಂಕಿತರ ಸಂಖ್ಯೆ 20 ಕೋಟಿಗೆ ತಲುಪಲಿದೆ ಎಂದು ಅದು ಅಂದಾಜಿಸಿದೆ. ಯೂರೋಪ್‌ ಹೊರತುಪಡಿಸಿ ಇತರೆಡೆ ಕೋವಿಡ್‌ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅಮೆರಿಕ, ಬ್ರೆಜಿಲ್‌, ಇಂಡೋನೇಷ್ಯಾ, ಬ್ರಿಟನ್‌ ಮ್ತು ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.