ADVERTISEMENT

Covid-19 World Update| 6.15 ಕೋಟಿ ಜನರಿಗೆ ಸೋಂಕು, 4.26 ಸೋಂಕಿತರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2020, 16:31 IST
Last Updated 27 ನವೆಂಬರ್ 2020, 16:31 IST
ಪೂರ್ವ ಸ್ಕಾಟ್ಲೆಂಡ್‌ನಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುತ್ತಿರುವ ಯುವತಿ  (ಎಎಫ್‌ಪಿ ಚಿತ್ರ)
ಪೂರ್ವ ಸ್ಕಾಟ್ಲೆಂಡ್‌ನಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುತ್ತಿರುವ ಯುವತಿ (ಎಎಫ್‌ಪಿ ಚಿತ್ರ)   

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 6.15 (6,15,75,075) ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 4.26 (4,26,04,995) ಕೋಟಿ ಸೋಂಕಿತರು ಗುಣಮುಖರಾಗಿದ್ದು, 14.4 (14,42,589) ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಾರೆ 1.75 (1,75,27,491) ಕೋಟಿ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,05,018 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈ ವರೆಗೆ ಒಟ್ಟು 1,32,66,819 ಪ್ರಕರಣಗಳು ದಾಖಲಾಗಿದ್ದು, 2,69,692 ಜನರು ಮೃತಪಟ್ಟಿದ್ದಾರೆ.

ADVERTISEMENT

ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 90.3 ಲಕ್ಷ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 62.09 ಲಕ್ಷ, ಫ್ರಾನ್ಸ್‌ನಲ್ಲಿ 21.83 ಲಕ್ಷ, ರಷ್ಯಾದಲ್ಲಿ 21.87 ಲಕ್ಷ, ಸ್ಪೇನ್‌ನಲ್ಲಿ 16.37 ಲಕ್ಷಕ್ಕೆ ಏರಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.