ADVERTISEMENT

Covid-19 world update: ಅಮೆರಿಕದಲ್ಲಿ 60 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 31 ಆಗಸ್ಟ್ 2020, 16:44 IST
Last Updated 31 ಆಗಸ್ಟ್ 2020, 16:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸೋಮವಾರ ರಾತ್ರಿ ವೇಳೆಗೆ ಅಮೆರಿಕದಲ್ಲಿ 60 ಲಕ್ಷ ದಾಡಿದೆ. ಮಿನ್ನೆಸೋಟ, ಉತ್ತರ ಡಕೋಟ, ದಕ್ಷಿಣ ಡಕೋಟ,ಅಯೋವಾಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ಈಗ 60.02 ಲಕ್ಷ ಆಗಿದೆ. ಈವರೆಗೆ 1,83,000 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.

ಜಾನ್ಸ್‌ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ ಈವರೆಗೆ 2.5 ಕೋಟಿಗೂ ಹೆಚ್ಚಾಗಿದ್ದು, 8,44,000ಕ್ಕೂ ಹೆಚ್ಚು ಮರಣ ಸಂಭವಿಸಿದೆ. 1.65 ಕೋಟಿಗೂ ಹೆಚ್ಚು ಜನ ಗುಣಮುಖರಾಗಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಬ್ರಿಟ್‌ನಲ್ಲಿ 1,406 ಪ್ರಕರಣಗಳು ದೃಢಪಟ್ಟಿವೆ. ಭಾನುವಾರಕ್ಕೆ ಹೋಲಿಸಿದರೆ ಇದು ಕಡಿಮೆಯಾಗಿದೆ. ಭಾನುವಾರ ಅಲ್ಲಿ 1,715 ಹೊಸ ಪ್ರಕರಣಗಳು ಪತ್ತೆಯಾಗಿದ್ದವು.

ADVERTISEMENT

ಲಿಬಿಯಾದ ಮಿಸ್ರತಾ ನಗರದ ಮೇಯರ್ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ರಷ್ಯಾದಲ್ಲಿ ನವೆಂಬರ್–ಡಿಸೆಂಬರ್ ವೇಳೆಗೆ ಸಾಮೂಹಿಕ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅಲ್ಲಿನ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ತಿಳಿಸಿರುವುದಾಗಿ ಅಲ್ಲಿನ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.