ADVERTISEMENT

ಶ್ರೀಲಂಕಾ: ದಾಖಲೆ ಮಟ್ಟಕ್ಕೆ ಏರಿದ ಇಂಧನ ಬೆಲೆ, ಪೆಟ್ರೋಲ್‌ ದರ ₹420

ಏಜೆನ್ಸೀಸ್
Published 24 ಮೇ 2022, 14:15 IST
Last Updated 24 ಮೇ 2022, 14:15 IST
ಶ್ರೀಲಂಕಾದಲ್ಲಿ ಪೆಟ್ರೋಲ್ ಮತ್ತು ಡಿಸೆಲ್‌ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದ್ದು, ಕೊಲಂಬೊದ ಪೆಟ್ರೋಲ್ ಬಂಕ್‌ ಒಂದರಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತಿರುವುದು –ಎಎಫ್‌ಪಿ ಚಿತ್ರ
ಶ್ರೀಲಂಕಾದಲ್ಲಿ ಪೆಟ್ರೋಲ್ ಮತ್ತು ಡಿಸೆಲ್‌ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದ್ದು, ಕೊಲಂಬೊದ ಪೆಟ್ರೋಲ್ ಬಂಕ್‌ ಒಂದರಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತಿರುವುದು –ಎಎಫ್‌ಪಿ ಚಿತ್ರ   

ಕೊಲಂಬೊ: ಶ್ರೀಲಂಕಾದಲ್ಲಿ ಮಂಗಳವಾರ ಇಂಧನ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ಡೀಸೆಲ್‌ ಬೆಲೆಯನ್ನು ಲೀಟರ್‌ಗೆ ₹289ರಿಂದ ₹400ಕ್ಕೆ ಹಾಗೂ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ ₹338ರಿಂದ ₹420ಕ್ಕೆ ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್‌ನ ಭಾರಿ ನಷ್ಟವನ್ನು ಸರಿದೂಗಿಸಲು ಮಂಗಳವಾರದಿಂದಲೇ ಹೊಸ ದರಗಳನ್ನು ಜಾರಿಗೊಳಿಸಲಾಗಿದೆ ಎಂದು ಹೊಸದಾಗಿ ನೇಮಕಗೊಂಡ ಇಂಧನ ಸಚಿವ ಕಾಂಚನಾ ವಿಜೆಶೇಖರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT