ADVERTISEMENT

ನ್ಯೂಜಿಲೆಂಡ್‌ನಲ್ಲಿ ಗೇಬ್ರಿಯೆಲ್ ಚಂಡಮಾರುತ: ತುರ್ತು ಪರಿಸ್ಥಿತಿ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2023, 2:43 IST
Last Updated 14 ಫೆಬ್ರುವರಿ 2023, 2:43 IST
 ಗೇಬ್ರಿಯೆಲ್ ಚಂಡಮಾರುತದ ಪರಿಣಾಮ ಹಾಳಾಗಿರುವ ರಸ್ತೆ
ಗೇಬ್ರಿಯೆಲ್ ಚಂಡಮಾರುತದ ಪರಿಣಾಮ ಹಾಳಾಗಿರುವ ರಸ್ತೆ   

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ದೇಶದಲ್ಲಿ ಗೇಬ್ರಿಯೆಲ್ ಚಂಡಮಾರುತ ಅಪ್ಪಳಿಸಿದ್ದು, ದೇಶದ ಹಲವು ಭಾಗಗಳಿಗೆ ಹಾನಿಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಗೇಬ್ರಿಯೆಲ್ ಚಂಡಮಾರುತ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್‌ ಸರ್ಕಾರ ರಾಷ್ಟ್ರೀಯ ತುರ್ತುಸ್ಥಿತಿ ಘೋಷಣೆ ಮಾಡಿದೆ.

ಭಾನುವಾರ ಬೆಳಗ್ಗೆ ನ್ಯೂಜಿಲೆಂಡ್‌ನ ಉತ್ತರ ಭಾಗಕ್ಕೆ ಚಂಡಮಾರುತ ಅಪ್ಪಳಿಸಿದೆ. ಇದರ ಪರಿಣಾಮ ಜೋರು ಗಾಳಿ ಬೀಸುತ್ತಿದ್ದು, ವ್ಯಾಪಕ ಮಳೆ ಸುರಿಯುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಗ್ರಿಡ್ ವ್ಯವಸ್ಥೆ ಹಾಳಾಗಿದ್ದು ಲಕ್ಷಾಂತರ ಮನೆಗಳು ಕತ್ತಲಲ್ಲಿ ಮುಳುಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಆಕ್ಲೆಂಡ್, ನಾರ್ತ್‌ಲ್ಯಾಂಡ್‌ ಗಿಸ್ಬೋರ್ನ್, ಹಾಕ್ಸ್ ಬೇ ಸೇರಿದಂತೆ ಮೊದಲಾದ ಪ್ರದೇಶಗಳಲ್ಲಿ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಮಾರು 2 ಲಕ್ಷ ಮನೆಗಳಿಗೆ ತೊಂದರೆಯಾಗಿದ್ದು, 5 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ ಎಂದು ದಿ ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.