ADVERTISEMENT

ಆಸ್ಟ್ರೇಲಿಯಾದಲ್ಲಿ ಚಂಡಮಾರುತ: ಅಪಾರ ಹಾನಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 18:20 IST
Last Updated 12 ಏಪ್ರಿಲ್ 2021, 18:20 IST

ಪರ್ತ್‌ (ಆಸ್ಟ್ರೇಲಿಯಾ): ಪಶ್ಚಿಮ ಆಸ್ಟ್ರೇಲಿಯಾದ ಪ್ರದೇಶಗಳಲ್ಲಿ ‘ಸೆರೊಜಾ’ ಚಂಡಮಾರುತದ ಪರಿಣಾಮ ಹಲವು ನಗರಗಳಲ್ಲಿ ಅಪಾರ ಹಾನಿ ಸಂಭವಿಸಿದೆ.

ವಿದ್ಯುತ್‌ ಪೂರೈಕೆ ವ್ಯತ್ಯಯವಾಗಿದೆ. ಕೆಲವು ನಗರಗಳಲ್ಲಿ ಕಗ್ಗತ್ತಲು ಆವರಿಸಿದೆ. ಸುಮಾರು 31 ಸಾವಿರ ಗ್ರಾಹಕರಿಗೆ ತೊಂದರೆಯಾಗಿದೆ. 170 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಕಲ್ಬಾರ್ರಿ ನಗರದಲ್ಲಿ ಶೇಕಡ 70ರಷ್ಟು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT