ಢಾಕಾ:ಬಾಂಗ್ಲಾದೇಶದ ವಾಯವ್ಯ ಭಾಗದ ಪಂಚಗಡ ಜಿಲ್ಲೆಯ ಕೊರೊಟೊ ನದಿಯಲ್ಲಿ ಭಾನುವಾರ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಢಾಕಾದಿಂದ 468 ಕಿ.ಮೀ ದೂರದಲ್ಲಿರುವಪಂಚಗಡ ಜಿಲ್ಲೆಯಲ್ಲಿ ಹರಿಯುವ ಈ ನದಿಯ ವಿವಿಧ ಜಾಗಗಳಲ್ಲಿ ಶವಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿರುವುದಾಗಿ ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇನ್ನೂ ಆರು ಜನರುಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
70ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಭಾನುವಾರ ಮಗುಚಿತ್ತು ಎಂದುಪಂಚಗಡ ಜಿಲ್ಲೆಯ ಸೂಪರಿಂಟೆಂಡೆಂಟ್ ಎಸ್.ಎಂ. ಸಿರಾಜುಲ್ ಹೂಡಾ ಮಾಹಿತಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.